Saturday, May 18, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ| ನಾಳೆ ಪುನೀತ್ ರಾಜ್‍ಕುಮಾರ್ ಕಂಚಿನ ಪುತ್ಥಳಿ ಲೋಕಾರ್ಪಣೆ

ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ತಾಲ್ಲೂಕು ಅಪ್ಪು(ಡಾ.ಪುನೀತ್ ರಾಜ್ ಕುಮಾರ್) ಯುವ ಸಾಮ್ರಾಜ್ಯ ಸಂಘಟನೆ ದಾನಿಗಳ ಸಹಕಾರದಿಂದ ನಿರ್ಮಿಸಲಾಗಿರುವ ಅಪ್ಪು ಪುನೀತ್ ರಾಜ್‍ಕುಮಾರ್ ಅವರ ಕಂಚಿನ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮ ಅ.2ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿದೆ ಎಂದು ಪುತ್ಥಳಿ ನಿರ್ಮಾಣ ಸಮಿತಿಯ ಸಂಚಾಲಕ ಕೆ.ಎಲ್. ಮಹೇಶ್ ತಿಳಿಸಿದರು.

ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪುನೀತ್ ರಾಜ್‍ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಪುತ್ಥಳಿ ಲೋಕಾರ್ಪಣೆ ಮಾಡಲಿದ್ದು,
ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಗಣ್ಯರು ಹಾಗೂ ಕಿರುತೆರೆ ಹಾಗೂ ಚಲನಚಿತ್ರ ನಟನಟಿಯರು ಭಾಗವಹಿಸಲಿದ್ದಾರೆ ಎಂದರು.

ತಾಲ್ಲೂಕಿನ ಪುನೀತ್ ರಾಜಕುಮಾರ್ ಅಭಿಮಾನಿಗಳು, ಸಂಘ ಸಂಸ್ಥೆಗಳು ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸ ಬೇಕೆಂದು ಮನವಿ‌ ಮಾಡಿದರು.
ಈ ಸಂದರ್ಭದಲ್ಲಿ ಪುನೀತ್ ರಾಜ್‍ಕುಮಾರ್ ಪುತ್ಥಳಿ ಲೋಕಾರ್ಪಣೆ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!