ವರದಿ : ಪ್ರಭು ವಿ ಎಸ್
ಶಿಕ್ಷಕರು ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ಒದಗಿಸಿದರೆ ದೇಶದ ಸತ್ಪ್ರಜೆಗಳಾಗಿ ರೂಪುಗೊಂಡು ನಿರಂತರವಾಗಿ ಸಮಾಜದ ಅಭ್ಯುದ್ಯಯಕ್ಕೆ ನಿರಂತರವಾಗಿ ಶ್ರಮಿಸಲಿದ್ದಾರೆಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಶ್ರೀಗಳು ಅಭಿಪ್ರಾಯಪಟ್ಟರು.

ಮದ್ದೂರು ಪಟ್ಟಣದ ಶಿವಪುರದ ಪೂರ್ಣ ಪ್ರಜ್ಞಾ ಏಜುಕೇಷನ್ ಟ್ರಸ್ಟ್ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ 27ನೇ ವರ್ಷದ ಶಾಲಾ ವೈಭವ ಕಾರ್ಯಕ್ರಮದ ದಿವ್ಯ ಸಾನಿದ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಜೀವನದುದ್ದಕ್ಕೂ ಮಾನವೀಯ ಮೌಲ್ಯಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಮಾಜದ ಬೆಳವಣಿಗೆಗೆ ವಿದ್ಯಾರ್ಥಿಗಳ ಪಾತ್ರ ಅಪಾರವಾಗಿದ್ದು ಶಿಕ್ಷಣ ಒದಗಿಸಿದಲ್ಲಿ ಜಗತ್ತು ಸುಂದರವಾಗಿ ಬೆಳಗಲು ಶ್ರಮಿಸಲಿದ್ದು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅಕ್ಷರಭ್ಯಾಸವನ್ನು ಉಣ ಬಡಿಸುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯವೆಂದರು.
ಗುಣವಂತ ಪ್ರಜೆಗಳನ್ನಾಗಿ ರೂಪಿಸುವ ಮಹತ್ತರ ಜವಾಬ್ಧಾರಿ ಶಿಕ್ಷಕರು ಹಾಗೂ ಪೋಷಕರ ಮಹತ್ವ ಬಹಳಷ್ಟಿದ್ದು ಇಂದಿನ ದಿನಗಳಲ್ಲಿ ಪೋಷಕರು ಮಕ್ಕಳನ್ನು ಕೇವಲ ಅಂಕಗಳಿಕೆಗಷ್ಟೇ ಸೀಮಿತಗೊಳಿಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ.
ಜಿಲ್ಲಾಧಿಕಾರಿ ಡಾ.ಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ದಾಸರಾಗಿ ಶಿಕ್ಷಣದ ಕಡೆಗೆ ಹೆಚ್ಚಿನ ಗಮನಹರಿಸದಿರುವುದು ಆತಂಕಕಾರಿ ವಿಚಾರವಾಗಿದ್ದು ಯಾರೂ ಪುಸ್ತಕದ ಸಂಸ್ಕೃತಿಯನ್ನು ರೂಡಿಸಿಕೊಳ್ಳುತ್ತಾರೋ ಮಕ್ಕಳು ಪುಸ್ತಕದ ಪ್ರೇಮವನ್ನು ಬೆಳೆಸಿಕೊಂಡು ಅಧ್ಯಯನ ಶೀಲರಾಗುತ್ತಾರೆಂದು ಕಿವಿಮಾತು ಹೇಳಿದರು.
ಮೊಬೈಲ್ ಹಾವಳಿಯಿಂದಾಗಿ ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿರುವ ಉದಾಹರಣೆಗಳು ಸಾಕಷ್ಟಿದ್ದು “ಪುಸ್ತಕ ತಲೆ ತಗ್ಗಿಸಿ ಓದು ಸಮಾಜದಲ್ಲಿ ಮತ್ತು ಜಗತ್ತಿನಲ್ಲಿ ತಲೆ ಎತ್ತಿ ನಡೆಯುವಂತೆ ಮಾಡುತ್ತೇನೆ” “ಮೊಬೈಲ್ ತಲೆ ತಗ್ಗಿಸಿ ನೋಡು ಮುಂದೆಯೂ ತೆಲೆ ಎತ್ತದಂತೆ ಮಾಡುತ್ತೇನೆ” ಎಂಬ ನಾಣ್ಣುಡಿಯಂತೆ ಪೋಷಕರು ಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಪುಸ್ತಕದತ್ತ ಗಮನಹರಿಸಲು ಕಾರ್ಯೋನ್ಮುಖ ರಾಗಬೇಕೆಂದರು.
ಪ್ರತಿಭಾ ಪುರಸ್ಕಾರ:
ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ತುö್ಯನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಯಲ್ಲಿ ವ್ಯಾಸಂಗ ಮಾಡಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಇತ್ತೀಚೆಗೆ ನಿವೃತ್ತಿಗೊಂಡ ಬಿ.ಇ.ಓ ಗಳಾದ ಸಿ.ಎಚ್.ಕಾಳೀರಯ್ಯ ಹಾಗೂ ಬಿ.ಎನ್. ಮರಿಗೌಡರವರನ್ನು ಶಾಲೆಯ ಆಡಳಿತ ಮಂಡಳಿ ಮತ್ತು ಗಣ್ಯರು ಅಭಿನಂದಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷೆ ಕೆ.ಪಿ.ಕೋಕಿಲಾಅರುಣ್, ತಹಶೀಲ್ದಾರ್ ಡಾ.ಸ್ಮಿತಾರಾಮು, ಅಪರ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎಸ್.ಇ.ಗಂಗಾಧರಸ್ವಾಮಿ, ನಿವೃತ್ತ ಪ್ರಾಂಶುಪಾಲ ಡಾ.ಬಿ.ಕೃಷ್ಣ, ಕಲಾವಿದರಾದ ಡಿಂಗ್ರಿ ನಾಗರಾಜು, ಶಂಕರ್, ಸ್ವಾತಿ, ಗೋಲ್ಡ್ ಸುರೇಶ್, ತುಕಾಲಿ ಸಂತೋಷ್, ಸಂಸ್ಥೆಯ ಅಧ್ಯಕ್ಷೆ ಪಿ.ಕಸ್ತೂರಿ, ಮುಖ್ಯ ಶಿಕ್ಷಕ, ಕಾರ್ಯದರ್ಶಿ ಎಚ್.ಆರ್.ಅನಂತೇಗೌಡ, ಉಪನ್ಯಾಸಕರಾದ ಎಂ.ರಾಜೇಂದ್ರ, ಜಿ.ಎನ್.ಪುಟ್ಟರಾಜು, ಜಿಲ್ಲಾ ಪ್ರೌಢಶಾಲಾ ಪ್ರಧಾನ ಕಾರ್ಯದರ್ಶಿ ಕೆ.ಪಿ.ನಾಗೇಶ್ ಇತರರಿದ್ದರು.




