Friday, November 20, 2026

ಪ್ರಾಯೋಗಿಕ ಆವೃತ್ತಿ

ಗುಣಮಟ್ಟದ ಹಾಲು ಪೂರೈಸಿ- ಸಂಘ ಬೆಳೆಸಿ: ಬಿ.ಆರ್.ರಾಮಚಂದ್ರು

ಹಾಲು ಉತ್ಪಾದಕರು ಉತ್ತಮ ಗುಣಮಟ್ಟದ ಹಾಲು ಪೂರೈಸುವ ಮೂಲಕ ತಮ್ಮ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಬೆಳೆಸಿ ಅಭಿವೃದ್ಧಿಯತ್ತ ಸಾಗಿಸಬೇಕೆಂದು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಿ.ಆರ್.ರಾಮಚಂದ್ರು ತಿಳಿಸಿದರು.

ಮಂಡ್ಯ ತಾಲ್ಲೂಕಿನ ಹೆಮ್ಮಿಗೆ ಗ್ರಾಮದಲ್ಲಿ ಆಯೋಜನೆಗೊಂಡಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ಗ್ರಾಮದ ಹಾಲು ಶೀಥಲೀಕರಣ(ಬಿಎಂಸಿ)ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗ್ರಾಮದಲ್ಲಿ ಆರಂಭವಾಗಿರುವ ಬಿ.ಎಂ.ಸಿ ಘಟಕದಿಂದ ಸಾಕಷ್ಟು ಅನುಕೂಲವಿದೆ.ಹಾಲು ಉತ್ಪಾದಕರು ಗುಣಮಟ್ಟದ ಹಾಲು ಪೂರೈಸಿದರೆ ಅವರಿಗೆ ಒಳ್ಳೆಯ ದರ ದೊರೆತು ಸಂಘ ಅಭಿವೃದ್ಧಿ ಆಗುತ್ತದೆ. ಒಂದು ವೇಳೆ ಒಬ್ಬರು ತಪ್ಪುಮಾಡಿ ಕಳಪೆ ಹಾಲು ಪೂರೈಸಿದರೆ ಬಿಎಂಸಿ ಘಟಕದಲ್ಲಿರುವ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಲೀಟರ್ ಹಾಲು ಹಾಳಾಗಿ ರೈತರಿಗೆ ಸಿಗುವ ಹಣವೂ ಕಡಿತವಾಗಿ ಸಂಘಕ್ಕೆ ನಷ್ಟವಾಗುತ್ತದೆ.ದಯಮಾಡಿ ರೈತರು ಗುಣಮಟ್ಟದ ಹಾಲು ಪೂರೈಸಿ ಎಂದು ಮನವಿ ಮಾಡಿದರು.

ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಜನ್ಮದಿನದ ಅಂಗವಾಗಿ ಪ್ರತಿವರ್ಷ ಸಹಕಾರ ಸಪ್ತಾಹ ಆಚರಿಸುತ್ತಿರುವುದು ಶ್ಲಾಘನೀಯ.ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸಹಕಾರ ಸಪ್ತಾಹ ನಡೆಯಲಿದ್ದು,ಜನರಿಗೆ ಸಹಕಾರ ಸಂಘಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಲಿದೆ ಎಂದರು.

ವೇದಿಕೆಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಉಪಾಧ್ಯಕ್ಷ ರಘುನಂದನ್, ನಿರ್ದೇಶಕ ನೆಲ್ಲಿಗೆರೆ ಬಾಲು, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಹೆಚ್.ಸಿ.ಕಾಳೇಗೌಡ, ಹಾಲಹಳ್ಳಿ ಅಶೋಕ್, ಸಹಕಾರ ಸಂಘಗಳ ಉಪನಿಬಂಧಕ ವಿಕ್ರಮ್ ರಾಜೇಅರಸ್, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಂ.ಕೆ.ಸುಂದರಪ್ಪ ಹಾಗೂ ಜಿ.ಪಂ.ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ