Friday, September 20, 2024

ಪ್ರಾಯೋಗಿಕ ಆವೃತ್ತಿ

ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ- ಶ್ರೀನಿವಾಸ್ 

ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯನ್ನು ಮಾಡುವ ಮೂಲಕ ಕೆಲಸವನ್ನು ಬೇಗ ಮುಗಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ಶಾಸಕ ಎಂ.ಶ್ರೀನಿವಾಸ್ ಹೇಳಿದರು.

ಮಂಡ್ಯ ವಿಧಾನಸಭಾ ಕ್ಷೇತ್ರದ ಕೆರಗೋಡು ಹೋಬಳಿಯ ವಿವಿಧ ಗ್ರಾಮಗಳಲ್ಲಿ 122 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಮಾಡುವ ಕಾಮಗಾರಿ ಹೆಚ್ಚು ಕಾಲ ಜನರಿಗೆ ಉಪಯೋಗಕ್ಕೆ ಬರುವಂತಿರಲಿ, ಆದ್ದರಿಂದ ಗುಣಮಟ್ಟದ ಸಾಮಗ್ರಿಗಳನ್ನು ಬಳಸಿ ಕಾಮಗಾರಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಕಾವೇರಿ ನೀರಾವರಿ ನಿಗಮ ನಿಯಮಿತ ವತಿಯಿಂದ ಹೊನ್ನನಾಯ್ಕನಹಳ್ಳಿ ಗ್ರಾಮದಲ್ಲಿ 20 ಲಕ್ಷ ರೂ ವೆಚ್ಚದಲ್ಲಿ ಎಸ್.ಟಿ.ಕಾಲೋನಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಹುಲಿವಾನ ಗ್ರಾಮದಲ್ಲಿ 15 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ವತಿಯಿಂದ 20 ಲಕ್ಷ ರೂ ವೆಚ್ಚದಲ್ಲಿ ಮಾರಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ ಕಾಮಗಾರಿ, ಮಾರಗೌಡನಹಳ್ಳಿ ಗ್ರಾಮದಲ್ಲಿ 16 ಲಕ್ಷ ರೂ ವೆಚ್ಚದಲ್ಲಿ 1ನೇ ಅಂಗನವಾಡಿ ಕೇಂದ್ರದ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು.

ಡಣಾಯಕನಪುರ ಗ್ರಾಮದಲ್ಲಿ 30 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಮುದ್ದುಂಗೆರೆ ಗ್ರಾಮದ ಬಸವೇಶ್ವರ ದೇವಸ್ಥಾನದಿಂದ ಕಲ್ಯಾಣ ಮಂಟಪದವರೆಗೆ 20 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಿವ್ಯಾ ಶಿವಕುಮಾರ್, ವಸಂತ ರಾಜು, ಪಾಪಣ್ಣ, ಪ್ರಕಾಶ್, ಇಂಜಿನಿಯರ್ ಶಂಕರ್, ಸುದರ್ಶನ್, ಗುತ್ತಿಗೆದಾರರಾದ ಎನ್.ಡಿ.ಪುಟ್ಟಸ್ವಾಮಿ, ಮನೋಜ್ ಗೌಡ, ಕೆ.ರವೀಂದ್ರ,ನಾರಾಯಣ್ ಮತ್ತಿತರರು ಇದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!