Friday, October 11, 2024

ಪ್ರಾಯೋಗಿಕ ಆವೃತ್ತಿ

ಶೀಘ್ರ ಹಾಲಹಳ್ಳಿ ಸ್ಲಂ ನಿವಾಸಿಗಳಿಗೆ ವಸತಿ ಹಂಚಿಕೆ

ಮಂಡ್ಯ ನಗರದ ಹಾಲಹಳ್ಳಿ ಸ್ಲಂ ನಿವಾಸಿಗಳಿಗೆ ಶೀಘ್ರ ವಸತಿ ಹಂಚಿಕೆ ಮಾಡುವುದಾಗಿ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು.

ಕರ್ನಾಟಕ ಕೊಳಚೆ ನಿರ್ಮೂಲನ ಮಂಡಳಿಯ ತಾಂತ್ರಿಕ ನಿರ್ದೇಶಕರು, ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರೊಂದಿಗೆ ಮಂಡ್ಯ ನಗರದ ಹಾಲಹಳ್ಳಿ ಸ್ಲಂನಲ್ಲಿ 712 ಮನೆಗಳ ಪೈಕಿ ಹಾಲಿ ಹಂಚಿಕೆ ಮಾಡಲು ಸಿದ್ಧವಾಗಿರುವ 632 ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡುವ ಸಂಬಂಧ ಚರ್ಚಿಸಿದರು.

ಇದೇ ವೇಳೆ ರಾಜ್ಯ ವಸತಿ ಸಚಿವರಾದ ವಿ.ಸೋಮಣ್ಣ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ 632 ಮನೆಗಳ ಹಂಚಿಕೆ ಕಾರ್ಯಕ್ರಮವನ್ನು ಅತಿ ಶೀಘ್ರದಲ್ಲಿ ನೆರವೇರಿಸಲು ಸಚಿವರಿಗೆ ಕೋರಿದರು.

ಹಾಲಹಳ್ಳಿ ಸ್ಲಂನಲ್ಲಿ ಉಳಿದ 80 ಮನೆಗಳ ನಿರ್ಮಾಣಕ್ಕೆ ಅಡ್ಡಿಯಾಗಿದ್ದ ಒತ್ತುವರಿ ತೆರವುಗೊಳಿಸಲು ಈ ಹಿಂದೆ ಸಂಸದರು ತಹಶೀಲ್ದಾರ್ ಅವರಿಗೆ ಸೂಚಿಸಿದ್ದರು.

ಅದರಂತೆ ಹಾಲಿ ಒತ್ತುವರಿ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಅಧಿಕಾರಿಗಳು ಮುಂದಿನ 4-5 ತಿಂಗಳುಗಳಲ್ಲಿ ಹಾಲಹಳ್ಳಿ ಸ್ಲಮ್ಮಿನಲ್ಲಿ ಉಳಿದ 80 ಮನೆಗಳ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಚಿಕ್ಕಮಂಡ್ಯದ ಕೆರೆ ಅಂಗಳದಲ್ಲಿ ನಿರ್ಮಾಣವಾಗುತ್ತಿರುವ 572 ಮನೆಗಳ ಕಾಮಗಾರಿಯ ಸ್ಥಿತಿಗತಿಗಳ ಸಂಬಂಧ ಅಧಿಕಾರಿಗಳಿಂದ ವಿಸ್ತೃತ ಮಾಹಿತಿ ಪಡೆದರು.ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಾರ್ಯಪಾಲಕ ಅಭಿಯಂತರ ಹರೀಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!