Friday, September 20, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ರಸಪ್ರಶ್ನೆ

ಶ್ರೀರಂಗಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023 -24ನೇ ಸಾಲಿನ ಐ ಇ ಸಿ ,ಎಸ್ ಬಿ ಸಿ ಸಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ವಿದ್ಯಾರ್ಥಿಗಳಿಗೆ ಆಯುಷ್ಮಾನ್ ಭಾರತ್ -ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ, ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ, ಅಂಗಾಂಗ ದಾನ, ಹದಿಹರೆಯದವರ ಆರೋಗ್ಯ, ಮದುವೆಗೆ ಸೂಕ್ತ ವಯಸ್ಸು, ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ, ಮಾನಸಿಕ ಆರೋಗ್ಯ ವಿಷಯಗಳ ಕುರಿತಂತೆ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಎಂ ಪಿ ಸಿಂಧು ಬಿ.ಕಾಂ (ಪ್ರಥಮ ), ಎಂ ನಂದಿನಿ ಬಿ ಕಾಂ(ದ್ವಿತೀಯ) ಮೆರ್ಲಿನ್ ಜೊಯಿಸೆ ಬಿ ಎಸ್ ಸಿ (ತೃತೀಯ) ಬಹುಮಾನ ಪಡೆದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ತಡೆಗಟ್ಟುವ ಕುರಿತು ಅರಿವು ಮೂಡಿಸಲಾಯಿತು.

ಪ್ರಾಂಶುಪಾಲರಾದ ಡಾ. ಮಂಜುಳಾ ಎಂ ಕೆ ಅಧ್ಯಕ್ಷತೆ ವಹಿಸಿದ್ದರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ, ರೆಡ್ ಕ್ರಾಸ್ ಸಂಚಾಲಕರಾದ ಮೂರ್ತಿ ಐ ಆರ್, ಸಹಾಯಕ ಪ್ರಾಧ್ಯಾಪಕರಾದ ವಿನಯ ಪ್ರಭು, ಪುನೀತ್ ಕುಮಾರ್, ಚಿಕ್ಕಸ್ವಾಮಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬಿ ಮಂಗಳ ಹಾಗೂ ಆಶಾ ಕಾರ್ಯಕರ್ತೆ ಚಾಂದಿನಿ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!