ದಶಮುಖ ಸಾಮಾಜಿಕ ಸೇವಾ ಟ್ರಸ್ಟ್ ವತಿಯಿಂದ ಆರೋಗ್ಯಕರ ಜೀವನಕ್ಕೆ ರಾಗಿಯ ಮಹತ್ವ ಕುರಿತು ಉಪನ್ಯಾಸ ಮತ್ತು ರಾಜ್ಯ ಮಟ್ಟದ ನಾಟಿಕೋಳಿ ಸಾಂಬಾರ್ನಲ್ಲಿ ರಾಗಿಮುದ್ದೆ ಉಣ್ಣುವ ಸ್ಪರ್ಧೆಯನ್ನು ಫೆ.5ರಂದು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಹೆಚ್.ಕೆ.ಬೊಮ್ಮೇಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಶಮುಖ ಸಾಮಾಜಿಕ ಸೇವಾ ಟ್ರಸ್ಟ್ನ 8ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ರಾಗಿಯ ಮಹತ್ವವನ್ನು ತಿಳಿಸುವ, ರಾಗಿಯಿಂದ ಆರೋಗ್ಯಕ್ಕಾಗುವ ಉಪಯೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮವನ್ನು ಮಾ.5ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಬಿಳೇಕಹಳ್ಳಿ, ವಿಜಯಾ ಬ್ಯಾಂಕ್ ಲೇಔಟ್ನ ಮುಲ್ಕಿ ಸುಂದರಾಂ ಶೆಟ್ಟಿ ಮೆಮೋರಿಯಲ್ ಹಾಲ್ನಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ ಉದ್ಘಾಟಿಸಲಿದ್ದು, ಸಚಿವ ಎನ್.ಚಲುವರಾಯಸ್ವಾಮಿ, ಸ್ಥಳೀಯ ಶಾಸಕ ಸತೀಶ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು ಎಂದು ಹೇಳಿದರು.
ಅಂದು ಮಧ್ಯಾಹ್ನ 01.30ಕ್ಕೆ ರಾಜ್ಯ ಮಟ್ಟದ ನಾಟಿ ಕೋಳಿ ಸಾಂಬಾರ್ನಲ್ಲಿ ರಾಗಿ ಮುದ್ದೆ ಉಣ್ಣುವ ಸ್ಪರ್ಧೆ ನಡೆಯಲಿದ್ದು, ಪ್ರವೇಶ ಶುಲ್ಕ 1000 ರೂ ನಿಗದಿ ಪಡಿಸಲಾಗಿದೆ. ವಿಜೇತರಿಗೆ ಪ್ರಥಮ ಬಹುಮಾನ 25 ಸಾವಿರ, ದ್ವಿತೀಯ ಬಹುಮಾನ 15 ಸಾವಿರ ಹಾಗೂ ತೃತೀಯ ಬಹುಮಾನ 7,500 ರೂ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9242295531, 9611143118, 9663455883 ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಉಪಾಧ್ಯಕ್ಷ ಹೆಚ್.ಎ.ರವಿಶಂಕರ್, ಮಂಗಲ ಲಂಕೇಶ್, ಶಿವಪ್ಪ, ವೈ.ಡಿ.ರವಿಶಂಕರ್, ಜಿ.ಬಿ.ರಮೇಶ್ಗೌಡ ಇದ್ದರು.




