Saturday, May 18, 2024

ಪ್ರಾಯೋಗಿಕ ಆವೃತ್ತಿ

ಜೈಲುಶಿಕ್ಷೆ ವಿರುದ್ಧ ಮೇಲ್ಮನವಿ ಸಲ್ಲಿಸಲಿರುವ ರಾಹುಲ್ ಗಾಂಧಿ

ಮೋದಿ ಸರ್ ನೇಮ್ ವಿಚಾರಕ್ಕೆ ಸಂಬಂಧಿಸಿದಂತೆ ಗುಜರಾತಿನ ಸೂರತ್ ನ್ಯಾಯಾಲಯದಿಂದ 2 ವ‍ರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಸೋಮವಾರ ಗುಜರಾತ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ನಿರೀಕ್ಷೆ ಇದೆ.

ಮಾನನಷ್ಟ ಮೊಕದ್ದಮೆಯೊಂದರಲ್ಲಿ ದೋಷಿ ಎಂದು ಸಾಬೀತಾದ ಕಾರಣ ಲೋಕಸಭಾ ಸದಸ್ಯತ್ವ ಹಾಗೂ ಸರ್ಕಾರಿ ಬಂಗಲೆಯನ್ನು ಕಳೆದುಕೊಂಡಿರುವ ರಾಹುಲ್ ಗಾಂಧಿ ಇದೀಗ ಗುಜರಾತ್ ಹೈಕೋರ್ಟ್​ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ.

ಕಳೆದ ಮಾರ್ಚ್​ 24 ರಂದು ಸೂರತ್ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತು ಮತ್ತು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಇದಾದ ಬಳಿಕ ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲಾಗಿತ್ತು. ಅದೇ ಸಮಯದಲ್ಲಿ 11 ದಿನಗಳ ನಂತರ ರಾಹುಲ್ ಗಾಂಧಿ ಸೂರತ್ ಸೆಷನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸಲಿದ್ದಾರೆ. ರಾಹುಲ್ ಗಾಂಧಿಯವರ ಕಾನೂನು ತಂಡ ಏಪ್ರಿಲ್​ 3 ರಂದು ಅಂದರೆ ಸೋಮವಾರ ನ್ಯಾಯಾಲಯದ ಮೊರೆ ಹೋಗಲಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!