Thursday, September 19, 2024

ಪ್ರಾಯೋಗಿಕ ಆವೃತ್ತಿ

”ಮೋದಿಯವರೇ, ಅದಾನಿ ಶೆಲ್ ಕಂಪೆನಿಗಳಲ್ಲಿ ಹೂಡಿಕೆಯಾಗಿರುವ 20,000 ಕೋಟಿ ಬೇನಾಮಿ ಹಣ ಯಾರದ್ದು : ರಾಹುಲ್ ಗಾಂಧಿ ಪ್ರಶ್ನೆ

ಕೋಲಾರದಲ್ಲಿ ಭಾನುವಾರ ನಡೆದ ಜೈ ಭಾರತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ‘ಮೋದಿಯವರಿಗೆ ನಾನು ಸಂಸತ್ತಿನಲ್ಲಿ ಅದಾನಿ ವಿಷಯ ಪ್ರಸ್ತಾಪಿಸುವುದು ಇಷ್ಟವಿಲ್ಲ. ಹಾಗಾಗಿಯೇ ನನ್ನನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದರು. ಆದರೆ ನಾನು ಯಾವುದಕ್ಕೂ ಹೆದರುವುದಿಲ್ಲ. ನೀವು ನನ್ನ
ನ್ನು ಅನರ್ಹಗೊಳಿಸಿದರೂ ಅಷ್ಟೇ. ಜೈಲಿಗೆ ಕಳುಹಿಸಿದರೂ ಅಷ್ಟೇ. ನಾನು ಪ್ರಶ್ನೆ ಮಾಡುತ್ತೇನೆ.” ಎಂದು ತಿರುಗೇಟು ನೀಡಿದರು.

ಪ್ರಧಾನಿಗಳು ಅದಾನಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ನೀಡುವುದಾದರೆ, ನಾವು ಕೂಡ ದೇಶದ ಜನರಿಗೆ ಕಾರ್ಯಕ್ರಮಗಳನ್ನು ನೀಡಲು ಸಾಧ್ಯ! ನೀವು ನಿಮ್ಮ ಕೆಲಸ ಮಾಡಿ, ನಾವು ನಮ್ಮ ಕೆಲಸ ಮಾಡುತ್ತೇವೆ. ನೀವು ಹೃದಯಪೂರ್ವಕವಾಗಿ ಅಧಾನಿ ಅವರಿಗೆ ನೆರವು ನೀಡಿದರೆ, ನಾವು ಬಡವರು, ರೈತರು, ಮಹಿಳೆಯರು, ಯುವಕರಿಗೆ ಸಹಾಯ ಮಾಡುತ್ತೇವೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ತಮ್ಮ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ಇರುವುದು ನಿಜವೇ ಆದರೆ ಶೇ.50ರಷ್ಟು ನಿಗದಿ ಮಾಡಿರುವ ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ ಎಂದು ಸವಾಲು ಹಾಕಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!