Friday, November 20, 2026

ಪ್ರಾಯೋಗಿಕ ಆವೃತ್ತಿ

ಚೀನಾದಿಂದ ಭಾರತದ ಭೂಮಿ ವಶ, ಆದರೆ ಮೋದಿ ಸುಳ್ಳು ಹೇಳುತ್ತಿದ್ದಾರೆ – ರಾಹುಲ್ ಗಾಂಧಿ

ಭಾರತದ ಭೂಮಿಯನ್ನು ಚೀನಾ ವಶಪಡಿಸಿಕೊಂಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲಡಾಖ್‌ನ ಕಾರ್ಗಿಲ್‌ನಲ್ಲಿ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, “ಲಡಾಖ್‌ನ ಒಂದು ಇಂಚಿನಷ್ಟು ಚೀನಾ ವಶಪಡಿಸಿಕೊಂಡಿಲ್ಲ ಎಂದು ವಿರೋಧ ಪಕ್ಷದ ಸಭೆಯಲ್ಲಿ ಪ್ರಧಾನಿ ಹೇಳಿರುವುದು ದುಃಖಕರ ಸಂಗತಿ. ಇದು ಸಂಪೂರ್ಣ ಸುಳ್ಳು. ಇದು ನಮ್ಮ ಭೂಮಿಯ ವಿಷಯ. ಅವರು ನಮ್ಮ ಭೂಮಿಯನ್ನು ಕಸಿದುಕೊಳ್ಳಲು ಬಯಸಿದ್ದಾರೆ. ದೇಶದ ಗಡಿ ಪ್ರದೇಶವನ್ನು ಚೀನಾ ವಶಪಡಿಸಿಕೊಂಡಿದೆ ಎಂಬುದು ಇಲ್ಲಿರುವ ಪ್ರತಿಯೊಬ್ಬ ನಾಗರಿಕರಿಗೂ ತಿಳಿದಿರುವ ವಿಷಯ” ಎಂದು ಆರೋಪಿಸಿದರು.

ತಮ್ಮ ರ‍್ಯಾಲಿಯಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಳ್ಳಲಾದ ಭಾರತ್ ಜೋಡೋ ಯಾತ್ರೆಯ ಕುರಿತು ಮಾತನಾಡಿದರು. ಇದು ದೇಶದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಹರಡುವ ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ನಿಲ್ಲುವ ಗುರಿಯಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ