Thursday, July 25, 2024

ಪ್ರಾಯೋಗಿಕ ಆವೃತ್ತಿ

ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

18ನೇ ಲೋಕಸಭೆಯ ವಿಪಕ್ಷ ನಾಯಕನಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಯ್ಕೆಯಾಗಿರುವುದಾಗಿ ವರದಿಯಾಗಿದೆ.

ದೆಹಲಿಯಲ್ಲಿ ಇತ್ತೀಚೆಗೆ ಕಾಂಗ್ರೆಸ್‌ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಈ ಸಭೆಯ ಬಳಿಕ ಮಾತನಾಡಿದ್ದ ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, “ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ಸರ್ವಾನುಮತದಿಂದ ರಾಹುಲ್ ಗಾಂಧಿಯವರಿಗೆ ಮನವಿ ಮಾಡಲಾಗಿದೆ” ಎಂದು ತಿಳಿಸಿದ್ದರು.

“>

(ಜೂನ್ 25) ಕೂಡ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆಸಲಾಗಿತ್ತು. ಈ ಸಭೆಯ ಬಳಿಕ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, “ಉತ್ತರ ಪ್ರದೇಶದ ರಾಯ್‌ಬರೇಲಿಯ ಸಂಸದರಾಗಿರುವ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿಪಕ್ಷ ನಾಯಕನಾಗಿ ನೇಮಿಸಲಾಗಿದೆ. ಈ ಬಗ್ಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರಿಗೆ ಮಾಹಿತಿ ನೀಡಲಾಗುವುದು” ಎಂದು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!