Friday, September 20, 2024

ಪ್ರಾಯೋಗಿಕ ಆವೃತ್ತಿ

ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಜಯಭೇರಿ; ವಯನಾಡಿನಲ್ಲೂ ಮುನ್ನಡೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯಬರೇಲಿಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ರಾಹುಲ್ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್‌ ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.

ಕೇರಳದ ವಯನಾಡು ಕ್ಷೇತ್ರದಿಂದಲೂ ಸ್ಪರ್ಧಿಸಿರುವ ರಾಹುಲ್ ಅವರು ಸಿಪಿಎಂನ ಅಭ್ಯರ್ಥಿಯಾಗಿರುವ ಅನ್ನೇ ರಾಜ ಅವರಿಗಿಂತ 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಮೂರನೇ ಸ್ಥಾನದಲ್ಲಿದೆ.

ದೇಶದ ಅತೀ ಹೆಚ್ಚು ಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಭಾರಿ ಹಿನ್ನಡೆ ಅನುಭವಿಸಿದೆ. 80 ಸ್ಥಾನಗಳಿರುವ ರಾಜ್ಯದಲ್ಲಿ ಸಮಾಜವಾದಿ ಪಕ್ಷ 37,ಬಿಜೆಪಿ 32, ಕಾಂಗ್ರೆಸ್ 8, ಆರ್‌ಎಲ್‌ಡಿ 2 ಹಾಗೂ ಪಕ್ಷೇತರ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.

ಕೇರಳದಲ್ಲಿ 13, ಐಯುಎಂಎಲ್ 2, ಬಿಜೆಪಿ 2, ಸಿಪಿಐಎಂ 1 ಹಾಗೂ ಇಬ್ಬರು ಪಕ್ಷೇತರರು 2 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!