Saturday, May 18, 2024

ಪ್ರಾಯೋಗಿಕ ಆವೃತ್ತಿ

ಪ್ರಜ್ವಲ್ ಲೈಂಗಿಕ ಹಗರಣ | ಸಂತ್ರಸ್ತೆಯರಿಗೆ ನೆರವಾಗಿ ಎಂದು ಸಿಎಂಗೆ ಪತ್ರ ಬರೆದ ರಾಹುಲ್ ಗಾಂಧಿ ಹೇಳಿದ್ದೇನು ?

ಪ್ರಜ್ವಲ್ ಲೈಂಗಿಕ ಹಗರಣದಲ್ಲಿ ಸಂತ್ರಸ್ತೆಯರಿಗೆ ನೆರವು ನೀಡಿ. ಅವರಿಗೆ ಸ್ವಾಂತ್ವನ ಹೇಳಿ. ಜೊತೆಗೆ, ಸಂತ್ರಸ್ತರು ನ್ಯಾಯ ಪಡೆಯಲು ಅಗತ್ಯವಿರುವ ಬೆಂಬಲ ಒದಗಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ. “ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ನ್ಯಾಯ ಸಿಗುವಂತೆ ಮಾಡಲು ಹೋರಾಟ ನಡೆಸಬೇಕಾದ್ದ ಕಾಂಗ್ರೆಸ್‌ನ ಜವಾಬ್ದಾರಿಯಾಗಿದೆ. ಇಂತದೊಂದು ಇಂತಹ ಘೋರ ಕೃತ್ಯದ ಬಗ್ಗೆ ಬಿಜೆಪಿ ನಾಯಕರಿಗೆ ಮಾಹಿತಿ ನೀಡಿದ್ದರೂ, ಪ್ರಧಾನಿ ಮೋದಿ ಅವರು ಸಾಮೂಹಿಕ ಅತ್ಯಾಚಾರಿಯ ಪರ ಮತ ಯಾಚಿಸಿರುವುದು ಆಘಾತಕಾರಿ ಸಂಗತಿ” ಎಂದು ಹೇಳಿದ್ದಾರೆ.

“ಕೃತ್ಯಗಳಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಕಾನೂನು ವ್ಯಾಪ್ತಿಗೆ ತಂದು, ಅಪರಾಧಿಗಳಿಗೆ ಶಿಕ್ಷೆ ಕೊಡಿಸಬೇಕಾದ ಹೊಣೆಗಾರಿಗೆ ನಮ್ಮ ಮೇಲಿದೆ. ಅತ್ಯಾಚಾರ ನಡೆಸಿರುವ ವ್ಯಕ್ತಿಗೆ ಕಾನೂನಿನ ಮೂಲಕ ವಿಧಿಸಲು ಸಾಧ್ಯವಿರುವ ಅತ್ಯಂತ ಕಠಿಣ ಶಿಕ್ಷೆ ಆಗಬೇಕು” ಎಂದು ರಾಹುಲ್‌ ಹೇಳಿದ್ದಾರೆ.

“ತನ್ನನ್ನು ಸಹೋದರ, ಮಗನಂತೆ ಭಾವಿಸಿದ್ದ ನೂರಾರು ಮಹಿಳೆಯರ ಮೇಲೆ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಹಿಳೆಯರ ಗೌರವ ಹಾಳು ಮಾಡಿದ್ದಾನೆ. ತನ್ನ ಕೃತ್ಯಗಳನ್ನು ತಾವೇ ವಿಡಿಯೋ ಮಾಡಿಕೊಂಡಿರುವ ಆತನಿಗೆ ಶಿಕ್ಷೆಯಾಗಬೇಕು” ಎಂದಿದ್ದಾರೆ.

“ಪ್ರಜ್ವಲ್ ಕೃತ್ಯದ ಬಗ್ಗೆ 2023ರ ಡಿಸೆಂಬರ್‌ನಲ್ಲಿಯೇ ಬಿಜೆಪಿ ಮುಖಂಡ ಜಿ ದೇವರಾಜೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದರು. ಆದರೂ, ಆತನ ಪರವಾಗಿ ಮೋದಿ ಪ್ರಚಾರ ನಡೆಸಿದ್ದಾರೆ. ಪ್ರಜ್ವಲ್‌ ವಿದೇಶಕ್ಕೆ ಪರಾರಿಯಾಗಲು ಕೇಂದ್ರ ಸರ್ಕಾರವು ಇಚ್ಛೆಯಿಂದಲೇ ಸಹಕಾರ ನೀಡಿದೆ. ಆರೋಪಿಯನ್ನು ರಕ್ಷಿಸುತ್ತಿರುವ ಪ್ರಧಾನಿ ಮತ್ತು ಗೃಹ ಸಚಿವರ ನಡೆಯನ್ನು ಖಂಡಿಸಬೇಕು” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ತುಟಿ ಬಿಚ್ಚದ ಇಂತಹ ರಾಜಕಾರಣಿಗಳನ್ನು ನನ್ನ 20 ವರ್ಷದ ರಾಜಕೀಯದಲ್ಲಿ ಎಂದೂ ನೋಡಿರಲಿಲ್ಲ. ಮಣಿಪುರದಲ್ಲೂ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವರನ್ನು ಪ್ರಧಾನಿ ಬೆಂಬಲಿಸಿದ್ದರು” ಎಂದು ಆರೋಪಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!