Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ರೈಲ್ವೇ ಕೆಳಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಶುಕ್ರವಾರ ಮಹವೀರ ವೃತ್ತದ ಬಳಿ ರೈಲ್ವೇ ಕೆಳ ಸೇತುವೆ ನಿರ್ಮಾಣ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸ್ಥಳ ಪರಿಶೀಲನೆ ಮಾಡಿದರು.

ಜಿಲ್ಲಾಧಿಕಾರಿ ಡಾ.ಹೆಚ್.ಎನ್. ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು.

nudikarnataka.com

ನಂತರ ಮಾತನಾಡಿದ ಶಾಸಕರು, ಬಹಳ ವರ್ಷಗಳಿಂದ ರೈಲ್ವೆ ಕೆಳ ಸೇತುವೆ ನಿರ್ಮಾಣಕ್ಕೆ ವರ್ತಕರು ಹಾಗೂ ಸಾರ್ವಜನಿಕರು ಮನವಿ ಮಾಡಿದ್ದರು. ಈ ಹಿನ್ನಲೆ ನಾಳೆಯಿಂದ ಕಾಮಗಾರಿ ಶುರುವಾಗಲಿದ್ದು ಸಾರ್ವಜನಿಕ ಹಾಗೂ ವರ್ತಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿ ನಡೆಯುತ್ತದೆ ಎಂದರು.

ಈ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ಅಧಿಕಾರಗಳು ಹಾಗೂ ನಗರಸಭೆ ಆಯುಕ್ತ ಮಂಜುನಾಥ್ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ