ಮದ್ದೂರು ತಾಲ್ಲೂಕಿನ ಭಾರತೀನಗರ ವ್ಯಾಪ್ತಿಯ ಯಲಾದಹಳ್ಳಿ ಗ್ರಾಮದ ಮಂಟೇಸ್ವಾಮಿ ಎಂಬುವರ ಮನೆಗೋಡೆ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಧರೆಗುರುಳಿದ ಹಿನ್ನಲೆಯಲ್ಲಿ ಇಂದು ಶಾಸಕ ಡಿ.ಸಿ ತಮ್ಮಣ್ಣ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎಡೆಬಿಡದೆ ಸುರಿಯುತ್ತಿರುವ ಮಳೆಯ ಪರಿಣಾಮ ಮನೆಯ ಗೋಡೆ ಸಂಪೂರ್ಣ ಕುಸಿದುಬಿದ್ದಿದೆ. ದಿನ ಬಳಕೆ ವಸ್ತುಗಳಿಗೆ ಹಾನಿಯಾಗಿದ್ದು,ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ವೆಂಕಟೇಶ್ ಅವರು ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದು,ಆರ್ಥಿಕವಾಗಿ ಸಂಕಷ್ಟದ ಸ್ಥಿತಿಯಲ್ಲಿದ್ದಾರೆ. ಮಳೆಯಿಂದ ಮನೆ ಗೋಡೆ ಕುಸಿದಿದ್ದು ವಾಸಕ್ಕೆ ತುಂಬಾ ತೊಂದರೆಯಾಗಿದೆ ಎಂದು ವೆಂಕಟೇಶ್ ಅಳಲು ತೋಡಿಕೊಂಡರು. ಘಟನೆ ಸ್ಥಳಕ್ಕೆ ಶಾಸಕ ಡಿ.ಸಿ.ತಮ್ಮಣ್ಣ ಭೇಟಿ ನೀಡಿ ಪರಿಹಾರ ಧನ ವಿತರಿಸಿದರು.
ನಂತರ ಕುಟುಂಬಕ್ಕೆ ಧೈರ್ಯ ಹೇಳಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳ ಪರಿಶೀಲಿಸಿ ಸರ್ಕಾರದಿಂದ ಪರಿಹಾರ ಕೊಡಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಮನು, ಗ್ರಾಮದ ಮುಖಂಡರಾದ ಲೋಕೇಶ್,ರಾಜಣ್ಣ,ರಾಜೇಶ,ಶಶಿಕಾಂತ್,ಪಾಪಣ್ಣ, ಸೇರಿದಂತೆ ಇತರರು ಉಪಸ್ಥಿತರಿದ್ದರು..




