Thursday, May 16, 2024

ಪ್ರಾಯೋಗಿಕ ಆವೃತ್ತಿ

ಮಳೆಹಾನಿ ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳ ಭೇಟಿ

ಮಳವಳ್ಳಿ ತಾಲ್ಲೂಕಿನ ಹಲಗೂರು ಕೆರೆಯ ಸುತ್ತಮುತ್ತ ವಾಸಿಸುತ್ತಿದ್ದ ಪೌರಕಾರ್ಮಿಕರ ಗುಡಿಸಲು (ಶೆಡ್)ಗಳು ಮಳೆಯಿಂದ ಹಾನಿಗೊಳಗಾಗಿದ್ದು,ಸಂತ್ರಸ್ತರಿಗೆ ನಿರ್ಮಿಸಿದ ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆಹಾನಿಗೆ ಒಳಗಾದ 12 ಕುಟುಂಬಗಳು ಒಳಗೊಂಡಂತೆ, ಒಟ್ಟು 35 ಜನರಿಗೆ ಹಲಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಪೌಷ್ಟಿಕ ಆಹಾರ, ದಿನ ನಿತ್ಯ ಬಳಸುವ ವಸ್ತುಗಳನ್ನು ಒಳಗೊಂಡ ಕಿಟ್ ವಿತರಣೆ ಮಾಡಲಾಗಿದೆ.

ಕಾಳಜಿ‌‌ ಕೇಂದ್ರದಲ್ಲಿರುವವರಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ. ಮೂಲಭೂತ ಸೌಕರ್ಯಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಮಳವಳ್ಳಿ ತಹಶೀಲ್ದಾರ್ ವಿಜಯಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!