Thursday, September 19, 2024

ಪ್ರಾಯೋಗಿಕ ಆವೃತ್ತಿ

ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆ| ಏ.29ರಿಂದ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ತುಮಕೂರು, ಮೈಸೂರು, ಹಾಸನದಲ್ಲಿ ಮಳೆಯಾಗಲಿದೆ. ಈ ಹಿನ್ನೆಲೆ, ‘ಯೆಲ್ಲೋ ಅಲರ್ಟ್’​ ಘೋಷಣೆ ಮಾಡಿದೆ.

ಏ.27ರಂದು ಬೆಳಗಾವಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮುಂದಿನ ಏಳು ದಿನ ಒಣಹವೆ ಇರುವ ಸಾಧ್ಯತೆ ಇದೆ.

ಏ.29ರಂದು ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಮತ್ತು ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಏ.30ರಂದು ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಮೇ 1ರಂದು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕಲಬುರಗಿ ಜಿಲ್ಲೆಯಲ್ಲಿ 41.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಲಿದೆ.

ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ. ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಡಿಗ್ರಿ ಸೆಲ್ಸಿಯಸ್ ಮತ್ತು 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 40.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 38.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 38.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆ

ಏಪ್ರಿಲ್ 25 ರಿಂದ 29 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಹೆಚ್ಚಿನ ಬಿಸಿಲಿನ ತಾಪಮಾನವೂ ಮಕ್ಕಳು, ವೃದ್ಧರು, ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಆರೋಗ್ಯ ಸಮಸ್ಯೆ ತಂದೊಡ್ಡುವ ಸಾಧ್ಯತೆ ಇದೆ. ಹಾಗಾಗಿ, ಮಧ್ಯಾಹ್ನ 12 ರಿಂದ 3ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ ಎಂದು ತಿಳಿಸಿದೆ.

  • ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.
  • ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.
  • ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಿ.
  • ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.
  • ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ.
  • ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ.
  • ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ.
  • ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.
  • ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ.
  • ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.
  • ಓಆರ್‌ಎಸ್, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ದೇಹವನ್ನು ಮರು-ಜಲೀಕರಣ ಮಾಡಲು ಸಹಾಯ ಮಾಡುತ್ತದೆ.
  • ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.
  • ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.
  • ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ.
  • ರೈತರು/ಕೃಷಿ ಕಾರ್ಮಿಕರು ಹೊಲದಲ್ಲಿ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!