Saturday, October 19, 2024

ಪ್ರಾಯೋಗಿಕ ಆವೃತ್ತಿ

ರಾಜ್ಯದ 13 ಜಿಲ್ಲೆಗಳಲ್ಲಿ ಅ.20ರವರೆಗೆ ಮಳೆ ; ಆರೆಂಜ್ ಅಲರ್ಟ್

ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್‌ ಘೋಷಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಮಂಡ್ಯ ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಳೆಹೊನ್ನೂರು, ಕಾರ್ಕಳ, ನಂಜನಗೂಡು, ಜಯಪುರ, ಬೆಳ್ಳೂರು, ಸೋಮವಾರಪೇಟೆ, ಸರಗೂರು, ಉಪ್ಪಿನಂಗಡಿ, ಕದ್ರಾ, ಶಿರಾಲಿ, ಹಳಿಯಾಳ, ಹಾವೇರಿ, ಚಾಮರಾಜನಗರ, ಕುಶಾಲನಗರ, ನಾಪೊಕ್ಕು, ಕಮ್ಮರಡಿ, ಹುಣಸೂರಿನಲ್ಲಿ ಮಳೆಯಾಗಿದೆ. ಹಾರಂಗಿ, ಸಿದ್ದಾಪುರ, ಉಡುಪಿ, ಯಲ್ಲಾಪುರ, ಸಂಕೇಶ್ವರ, ಹಿಡಕಲ್, ಚಿಕ್ಕೋಡಿ, ಯಡವಾಡ, ಮಹಾಲಿಂಗಪುರ, ಭಾಗಮಂಡಲ, ಪೊನ್ನಂಪೇಟೆ, ಎಚ್‌ಡಿಕೋಟೆ, ಮದ್ದೂರು, ದಾವಣಗೆರೆ, ಗುಂಡ್ಲುಪೇಟೆ, ನಾಗಮಂಗಲದಲ್ಲಿ ಮಳೆಯಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!