Friday, November 20, 2026

ಪ್ರಾಯೋಗಿಕ ಆವೃತ್ತಿ

ನಾಳೆಯಿಂದ ಮಂಡ್ಯ ಸೇರಿದಂತೆ 4 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ರಾಜ್ಯದ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಬುಧವಾರದಿಂದ (ಡಿ.31) ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜ ನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆಯಾಗಬಹುದು. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ತಿಳಿಸಿದೆ.

ಸೋಮವಾರ ಬೀದರ್‌ನಲ್ಲಿ ಕನಿಷ್ಠ ಉಷ್ಣಾಂಶ 9.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು. ಇಲ್ಲಿ ಶೀತ ಅಲೆ ಮುಂದುವರಿದಿದೆ.

ವಿಜಯಪುರ 9.9, ಧಾರವಾಡ 10.4, ಗದಗ ಹಾಗೂ ರಾಯಚೂರು 11.8, ಬೆಳಗಾವಿ 12, ದಾವಣಗೆರೆ 12.5, ಮೈಸೂರು 13 ಹಾಗೂ ಶಿವಮೊಗ್ಗದಲ್ಲಿ 13.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ