Sunday, May 19, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಇಂದು ನಿಧನರಾಗಿದ್ದಾರೆ.

67 ವರ್ಷದ ರಾಜಾ ವೆಂಕಟಪ್ಪ ನಾಯಕ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಾಸಕ ರಾಜಾ ವೆಂಕಟಪ್ಪ ನಾಯಕ ಎರಡು ದಿನಗಳ ಹಿಂದೆಯಷ್ಠೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್​ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಪ್ತರಾಗಿದ್ದ ರಾಜಾ ವೆಂಕಟಪ್ಪ ನಾಯಕ,  ಈ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ನಂತರ ಸಚಿವರಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಯ ಗಳಿಗೆಯಲ್ಲಿ ಅವರಿಗೆ ಸಚಿವ ಸ್ಥಾನ ತಪ್ಪಿತ್ತು. ಇನ್ನು ಇತ್ತೀಚೆಗೆ ನಿಗಮ ಮಂಡಳಿಗಳಿಗೆ ನೇಮಕಾತಿ ವೇಳೆ ಅವರ ಹಿರಿತನವನ್ನು ಪರಿಗಣಿಸಿ ಕಾಂಗ್ರೆಸ್‌ ಸರ್ಕಾರ ಉಗ್ರಾಣ ನಿಮಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು.

ಶಾಸಕ ರಾಜಾ ವೆಂಕಟಪ್ಪ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಬಳಿ ಶಾಸಕರ ಕುಟುಂಬಸ್ಥರು ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಯಲ್ಲಿ ಪಾರ್ಥಿವ ಶರೀರದ ದರ್ಶನ ಪಡೆದುಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ಸಕಲ ಸರ್ಕಾರಿ  ಗೌರವದೊಂದಿಗೆ ಹುಟ್ಟೂರಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎನ್ನಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!