Friday, June 21, 2024

ಪ್ರಾಯೋಗಿಕ ಆವೃತ್ತಿ

ರೈತಪರ ಕಾಳಜಿ ಹೊಂದಿರುವ ನಾಯಕ ಕುಮಾರಸ್ವಾಮಿ: ರಾಜಾ ವೆಂಕಟಪ್ಪ

ರೈತ ಪರವಾಗಿ ಅಪಾರವಾದ ಕಾಳಜಿ ಹೊಂದಿರುವ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಬಲಿಸುವಂತೆ ಜೆಡಿಎಸ್ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ರಾಜಾ ವೆಂಕಟಪ್ಪ ನಾಯಕ ಮನವಿ ಮಾಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ.ಕುಮಾರ ಸ್ವಾಮಿ ಅವರು ಎಸ್ಟಿ ಸಮುದಾಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಅವರು ಸ್ಪರ್ಧೆ ಮಾಡಿದ್ದು, ಆದಕಾರಣ ಅವರನ್ನು ಗೆಲ್ಲಿಸುವ ಮೂಲಕ ಶಕ್ತಿ ತುಂಬಬೇಕು ಎಂದರು.

ರೈತರು ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ವೈಯಕ್ತಿಕವಾಗಿ 50 ಸಾವಿರ ರೂಪಾಯಿ ನೆರವು ನೀಡಿ ಮೃತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ, ವಿಧಾನಸಭೆ ಚುನಾವಣೆ ಮುಗಿದಿದೆ. ಗ್ಯಾರಂಟಿಯನ್ನು ನೀಡಿದ್ದಾರೆ. ಆದರೆ ಇದು ಲೋಕಸಭೆ ಚುನಾವಣೆಯಾಗಿದ್ದು, ನರೇಂದ್ರ ಮೋದಿ ಅವರು ದೇಶವನ್ನು ಸದೃಢ ನಡೆಸುತ್ತಿರುವ ಕಾರಣ ಅವರು ಮತ್ತೊಮ್ಮೆ ಪ್ರಧಾನಿಯಾಗುವ ಅವಶ್ಯಕತೆಯಿದೆ. ಕುಮಾರಸ್ವಾಮಿ ಅವರು ಗೆದ್ದರೆ ಸಚಿವರಾಗುತ್ತಾರೆ, ಆದಕಾರಣ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಬೇಕು ಎಂದರು.

ಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟೀ.ಶ್ರೀಕಂಠೇಗೌಡ, ಕೃಷ್ಣಮೂರ್ತಿ, ಕೃಷ್ಣಪ್ಪ, ದೇವರಾಜು, ತಾಯಣ್ಣ ನಾಯಕ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!