Wednesday, July 24, 2024

ಪ್ರಾಯೋಗಿಕ ಆವೃತ್ತಿ

ರಾಜೀವ್ ಗಾಂಧಿಯವರು ಆಧುನಿಕ‌ ಭಾರತದ ನಿರ್ಮಾತೃ

ವಿಶ್ವ ಕಂಡ ಭಾರತ ದೇಶದ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಜಯಕುಮಾರ್ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಭಾರತರತ್ನ ಮಾಜಿ ಪ್ರಧಾನಮಂತ್ರಿ ರಾಜೀವಗಾಂಧಿ ಸಂಸ್ಮರಣೆ ಮತ್ತು ಭಯೋತ್ಪಾದನಾ ವಿರೋಧಿ ದಿನ ಪ್ರಯುಕ್ತ ರಾಜೀವ ಗಾಂಧಿ ಭಾವಚಿತ್ರಕ್ಕೆ ಹಿರಿಯ ಕಾಂಗ್ರೆಸ್ಸಿಗರೊಂದಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಇಂದಿರಾಗಾಂಧಿ ಅವರ ಮರಣದ ನಂತರ ಭಾರತದ ಪ್ರಧಾನ ಮಂತ್ರಿಯಾದ ರಾಜೀವ್ ಗಾಂಧಿಯವರು ಬಹಳ ಚಿಕ್ಕವಯಸ್ಸಿನಲ್ಲೇ ಪ್ರಧಾನಿಯಾದವರು. 1984 ರ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ (404 ಸ್ಥಾನಗಳು) ಗೆದ್ದಿದ್ದರು. ಬಹು ಬೇಗನೆ ಜನಪ್ರಿಯ ಪ್ರಧಾನ ಮಂತ್ರಿಗಳೆನಿಸಿ ಕೊಂಡರ.

ಜನಮುಖಿ ಕಾರ್ಯಗಳಿಗೆ ಒತ್ತು ಕೊಟ್ಟರು. ಶ್ರೀಲಂಕಾದ ಎಲ್ಟಿಟಿಇ ಸಮಸ್ಯೆಯ ನಿಗ್ರಹಕ್ಕೋಸ್ಕರ ಅವರು, ಶ್ರೀಲಂಕಾಕ್ಕೆ ಭಾರತದ ಸೈನ್ಯವನ್ನು ಕಳುಹಿಸಿಕೊಟ್ಟ ಪರಿಣಾಮವಾಗಿ, ಅವರು ತಮ್ಮ ಜೀವವನ್ನು ತೆರಬೇಕಾಯಿತು ಎಂದರು.

ತಮಿಳುನಾಡಿನ ಪೆರಂಬೂರಿಗೆ ಬಹಿರಂಗ ಚುನಾವಣಾ ಭಾಷಣವನ್ನು ಮಾಡಲು ಹೋಗಿ, ಶ್ರೀಲಂಕಾದ ಎಲ್ಟಿಟಿಇಯವರ ಮಾನವ ಬಾಂಬ್ ಧಾಳಿಗೆ ತುತ್ತಾದರು.ಅಂದಿನಿಂದ ದೇಶದಲ್ಲಿ ಭಯೋತ್ಪಾದನಾ ವಿರೋಧಿ ದಿನ ಆಚರಿಸಿ ರಾಜೀವ್ ಗಾಂಧಿ ಅವರನ್ನು ಸ್ಮರಿಸಿಕೊಳ್ಳುತ್ತೇವೆ ಎಂದು ನುಡಿದರು.

ರಾಜೀವ್ ಗಾಂಧಿ ಅವರು ಆಧುನಿಕ ಭಾರತ ನಿರ್ಮಾಣಕ್ಕೆ ಸಂಕಲ್ಪ ಕೈಗೊಂಡು ಗ್ರಾಮೀಣ ಪ್ರದೇಶದ ಬಡ ಜನರಿಗೆ ವಸತಿ ಕಲ್ಪಿಸುವ ಉದ್ದೇಶದಿಂದ 1985ರಲ್ಲಿ ಪ್ರಧಾನಿ ರಾಜೀವ್ ಗಾಂಧಿ ಅವರು ‘ಇಂದಿರಾ ಆವಾಸ್ ಯೋಜನೆ’ಯನ್ನು ಜಾರಿಗೆ ತಂದರು. ಪ್ರಸ್ತುತ ಈ ಯೋಜನೆಯನ್ನು ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸಿಗರಾದ ದೀಪಕ್, ರಾಮಶೆಟ್ಟಿ, ಸೋನಿಯಾಗಾಂಧಿ ಬ್ರಿಗೇಡ್ ಅಧ್ಯಕ್ಷೆ ವೀಣಾಶಂಕರ್, ಚನ್ನಪ್ಪ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!