2025-2026 ನೇ ಸಾಲಿನ ಮಂಡ್ಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಡಾ.ಬಾಬು ಜಗಜೀವನ ರಾಂ ಸಂಘಗಳ ಒಕ್ಕೂಟದ ಅಧ್ಯಕ್ಷ ಹಾಗೂ ವಕೀಲರಾದ ಎನ್ ಆರ್ ಚಂದ್ರಶೇಖರ್ ನಾಗಮಂಗಲ ಅವರು ಆಯ್ಕೆಯಾಗಿದ್ಧಾರೆ.
ಸಾಹಿತ್ಯ, ಕ್ರೀಡೆ, ಸಾಮಾಜಿಕ ಸೇವೆ, ಶಿಕ್ಷಣ, ರಂಗಭೂಮಿ, ಆಡಳಿತ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ, ಮತ್ತಷ್ಟು ಪ್ರೇರೇಪಿಸುವ ಸಲುವಾಗಿ “ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ”ಗೆ ತಮ್ಮನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ನ.1 ರಂದು ಬೆಳಿಗ್ಗೆ 9.00 ಗಂಟೆಗೆ ಮಂಡ್ಯನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣ ನಡೆಯುವ ಸಮಾರಂಭದಲ್ಲಿ ಚಂದ್ರಶೇಖರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.




