Thursday, April 18, 2024

ಪ್ರಾಯೋಗಿಕ ಆವೃತ್ತಿ

ಉತ್ತರ ಪ್ರದೇಶ| ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರದ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಇಂದು ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದಾರೆ.

ಶ್ರೀರಾಮ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ, ದೇಶವಿದೇಶಗಳಿಂದ ಐದು ಸಾವಿರಕ್ಕೂ ಹೆಚ್ಚು ಮಂದಿ ಗಣ್ಯರು ಪಾಲ್ಗೊಂಡಿದ್ದರು.

ಮಧ್ಯಾಹ್ನ 12.20 ಕ್ಕೆ ಧಾರ್ಮಿಕ ವಿಧಿ ವಿಧಾನಗಳು ಪ್ರಾರಂಭವಾಗಿ12.45ರವರೆಗೆ ಪೂಜಾ ವಿಧಿವಿಧಾನಗಳು ನೆರವೇರಿತು. ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ಹಿನ್ನೆಲೆ ಅಯೋಧ್ಯೆಯ ಇಡೀ ನಗರವನ್ನು 2500 ಕ್ವಿಂಟಾಲ್‌ಗೂ ಹೆಚ್ಚು ಹೂವಿನಿಂದ ಅಲಂಕರಿಸಲಾಗಿದ್ದು, ಪ್ರಾಣ ಪ್ರತಿಷ್ಠೆಯ ನಂತರ ಭಕ್ತರಿಗೆ ದೇವಾಲಯದ ಬಾಗಿಲು ತೆರೆಯಲಾಗುತ್ತದೆ ಎಂದು ದೇಗುಲದ ಟ್ರಸ್ಟ್ ತಿಳಿಸಿದೆ.

ಸಮಾರಂಭದಲ್ಲಿ ಎನ್‌ಎಸ್‌ಜಿ ಶೂಟರ್‌ಗಳ ಎರಡು ತಂಡಗಳು, ಆ್ಯಂಟಿ ಡ್ರೋನ್ ತಂತ್ರಜ್ಞಾನ ಹೊಂದಿದ ಎಟಿಎಸ್ ಕಮಾಂಡೋಗಳ ಆರು ತಂಡಗಳು ಮತ್ತು ಉತ್ತರ ಪ್ರದೇಶ ಮತ್ತು ಅರೆಸೇನಾ ಪಡೆಗಳ 15 ಸಾವಿರ ಪೊಲೀಸ್ ಸಿಬ್ಬಂದಿಯನ್ನು ಅಯೋಧ್ಯೆಯ ಭದ್ರತೆಗಾಗಿ ನಿಯೋಜಿಸಲಾಗಿದೆ.

ಆರ್‌ಎಸ್‌​ಎಸ್​ನ ಸರಸಂಘ ಚಾಲಕ ಮೋಹನ್ ಭಾಗವತ್​, ರಾಜ್ಯಪಾಲರಾದ ಆನಂದಿ ಬೆನ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಕೃಪೆ: ಈದಿನ.ಕಾಂ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!