Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜ.12ಕ್ಕೆ ರಾಮಕೃಷ್ಣ ಹೆಗಡೆ ಪುಣ್ಯಸ್ಮರಣೆ ; ರಕ್ತದಾನ ಶಿಬಿರ

ಲೋಕ್ ಶಕ್ತಿ ವತಿಯಿಂದ ಜ.12ರಂದು ಬೆಳಿಗ್ಗೆ 11ಕ್ಕೆ ನಗರದ ಗಾಂಧಿಭವನದಲ್ಲಿ ಮೌಲ್ಯಧಾರಿತ ಮತ್ತು ಅಧಿಕಾರ ವಿಕೇಂದ್ರೀಕರಣ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಅವರ 20ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ರಕ್ತದಾನ, ನೇತ್ರದಾನ ಹಾಗೂ ಸಾಧಕರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಚಂದ್ರಶೇಖರ್ ವಿ.ಸ್ಥಾವರಮಠ್ ತಿಳಿಸಿದರು.

ರಾಮಕೃಷ್ಣ ಹೆಗಡೆ ಅವರು ಅಧಿಕಾರದಲ್ಲಿದ್ದಾಗ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಜಾರಿಗೆ ತಂದAತಹ ಅನೇಕ ಯೋಜನೆಗಳು ಜನಮಾನಸದಲ್ಲಿ ಉಳಿದುಕೊಂಡಿದೆ. ಮೊದಲ ಬಾರಿಗೆ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು. ಅಧಿಕಾರ ವಿಕೇಂದ್ರೀಕರಣ, ಕನ್ನಡ ಕಾವಲು ಸಮಿತಿ, ಮಹಿಳೆಯರಿಗೆ ಶೇ.20ರಷ್ಟು ಮೀಸಲಾತಿ, ಲೋಕಾಯುಕ್ತ ಸಂಸ್ಥೆ ಜಾರಿ, ನ್ಯಾಯಬೆಲೆ ಅಂಗಡಿಗಳ ಮೂಲಕ ಬಡ ಮಹಿಳೆಯರಿಗೆ ಸೀರೆ, ರವಿಕೆ, ಪುರುಷರಿಗೆ ಪಂಚೆ ಶರ್ಟ್ ನೀಡುವ ಮೂಲಕ ಜನಪರವಾಗಿ ಕೆಲಸ ಮಾಡಿದ್ದರು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆ

ರಾಜ್ಯಾದ್ಯಂತ ಪಕ್ಷವನ್ನು ಸಂಘಟಿಸಲಾಗುತ್ತಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಾಗುವುದು. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿದ್ದು, ಅಂತಿಮಗೊಳಿಸಲಾಗುವುದು. ಮುಂದಿನ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಾನೂ ಸ್ಪರ್ಧಿಸುತ್ತಿದ್ದೇನೆ ಎಂದರು.
ರಾಮಕೃಷ್ಣಹೆಗಡೆ ಅವರು ಕಾಲವಾದರೂ ಅವರ ಜನಪರ ಯೋಜನೆಗಳ ಮೂಲಕ ಜೀವಂತವಾಗಿದ್ದಾರೆ. ಲೋಕ್ ಶಕ್ತಿ ಸ್ಥಾಪನೆ ಮಾಡಿದಾಗ ಮಂಡ್ಯದಲ್ಲಿಯೇ ಚಿಹ್ನೆ ಬಿಡುಗಡೆ ಮಾಡಿದ್ದರು. ಅದರಂತೆ ಪಕ್ಷವನ್ನು ಪುನರ್ ಸ್ಥಾಪಿಸುವ ನಿಟ್ಟಿನಲ್ಲಿ ಮಂಡ್ಯದಲ್ಲಿಯೇ ಅವರ 20ನೇ ವರ್ಷದ ಪುಣ್ಯಸ್ಮರಣೆ ಹಮ್ಮಿಕೊಳ್ಳಲಾಗಿದೆ ಎಂದರು.

ಅಂದು ನಡೆಯುವ ಸಮಾರಂಭವನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ಪಿ.ಪ್ರಕಾಶ್ ಉದ್ಘಾಟಿಸುವರು. ರಾಜ್ಯ ಪತ್ರಕರ್ತರ ಸಂಘದ ಕಾರ್ಯದರ್ಶಿ ಮತ್ತೀಕೆರೆ ಜಯರಾಮ್ ಪ್ರಧಾನ ಭಾಷಣ ಮಾಡುವರು. ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ರಕ್ತದಾನ ಶಿಬಿರಕ್ಕೆ ಚಾಲನೆ ನೀಡುವರು. ಹಿರಿಯ ಪತ್ರಕರ್ತ ಕಬ್ಬನಹಳ್ಳಿ ಶಂಭು ನೇತ್ರದಾನ ಶಿಬಿರಕ್ಕೆ ಚಾಲನೆ ನೀಡುವರು ಎಂದು ವಿವರಿಸಿದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಲೋಕ್ ಶಕ್ತಿಯ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಸವರಾಜಪ್ಪ ಅಭಿನಂದಿಸುವರು. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಲೋಕ್ ಶಕ್ತಿಯ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಸವರಾಜಪ್ಪ, ಮಾಣಿಕ್ಯನಹಳ್ಳಿ ವೆಂಕಟೇಶ್, ಯುವ ಘಟಕದ ರಾಜ್ಯಾಧ್ಯಕ್ಷ ಎಂ.ಎನ್.ಶAಕರ್ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!