Sunday, May 19, 2024

ಪ್ರಾಯೋಗಿಕ ಆವೃತ್ತಿ

ಮಹಿಳೆಯರಿಗೆ ಉಚಿತ ಸಾರಿಗೆ | ‘ಶಕ್ತಿ’ ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು 3 ತಿಂಗಳ ಕಾಲಾವಕಾಶ

ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರು ಉಚಿತ ಬಸ್ ಪ್ರಯಾಣದ ಸೌಲಭ್ಯ ಪಡೆಯಲು ಅಗತ್ಯವಿರುವ ಸ್ಮಾರ್ಟ್ ಕಾರ್ಡ್ ಗಳನ್ನು ಮೂರು ತಿಂಗಳ ಒಳಗಾಗಿ ಒದಗಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಈ ಕುರಿತು ಮಾಹಿತಿ ಹಂಚಿಕೊಂಡ ಅವರು, ನಮ್ಮ ಪಕ್ಷದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ “ಶಕ್ತಿ ಯೋಜನೆ”ಗೆ ನಾಳೆ (ಭಾನುವಾರ) ಚಾಲನೆ ದೊರಕಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದು, ಮೆಜಸ್ಟಿಕ್ ನಿಂದ ವಿಧಾನಸೌಧದ ವರೆಗಿನ ಮಾರ್ಗವೊಂದರಲ್ಲಿ ಕಂಡಕ್ಟರ್ ಮಾದರಿಯಲ್ಲಿ ಪ್ರಯಾಣಿಕರಿಗೆ ಟಿಕೆಟ್ ನೀಡಲಿದ್ದಾರೆ. ಇದೇ ವೇಳೆ ಕೆಲವರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್‌ಗಳ ವಿತರಣೆ ಮಾಡಲಿದ್ದೇವೆ ಎಂದು ಸಚಿವರು ಹೇಳಿದರು.

ನಿಯಮಾವಳಿಗಳಂತೆ ಯೋಜನೆ ಲಾಭ ಪಡೆಯ ಬಯಸುವವರು, ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು ಮೂರು ತಿಂಗಳು ಅವಧಿ ನೀಡಲಾಗಿದೆ. ಹಾಗೆಯೇ ಯಾವ ಬಸ್‌ಗಳಿಗೆ ಈ ಯೋಜನೆ ಅನ್ವಯವಾಗಲಿದೆ ಎನ್ನುವುದರ ಬಗೆಗೂ ಜಾಹೀರಾತು ಸಹಿತ ಸ್ವಷ್ಟ ಮಾಹಿತಿ ಕೊಟ್ಟಿದ್ದೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲಬೇಡ ಎಂದು ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!