Sunday, September 8, 2024

ಪ್ರಾಯೋಗಿಕ ಆವೃತ್ತಿ

ಬೆಂಗಳೂರು ದಕ್ಷಿಣ ಜಿಲ್ಲೆಯಾದ ರಾಮನಗರ: ಸಚಿವ ಸಂಪುಟದ ಒಪ್ಪಿಗೆ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕನಸು ಅಕ್ಷರಶಃ ನನಸಾಗಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಣ ಮಾಡಲು ಒಪ್ಪಿಗೆ ನೀಡಿದೆ.

ಸಭೆ ಬಳಕ ಮಾತನಾಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್‌ ಅವರು, ಬ್ರ್ಯಾಂಡ್ ಬೆಂಗಳೂರು ಮಾಡುವ ನಿಟ್ಟಿನಲ್ಲಿ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು,  ಹೆಸರು ಮಾತ್ರ ಬದಲಾವಣೆ ಆದ್ರೂ ಜಿಲ್ಲಾ ಕಾರ್ಯಗಳು ಮೊದಲಿನಂತೆಯೇ ನಿರ್ವಹಣೆ ಎಂದು ಹೇಳಿದ್ದಾರೆ.

ಬೆಂಗಳೂರು ಜಿಲ್ಲಾ ವ್ಯಾಪ್ತಿಗೆ ಒಳಪಡುವ ಎಲ್ಲ ಸಚಿವರು, ಶಾಸಕರು ಸೇರಿಕೊಂಡು ಕಳೆದ ಜು.9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಮನವಿ ಪತ್ರ ಸಲ್ಲಿಕೆ ಮಾಡಿದ್ದರು. ಈ ವೇಳೆ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಹಾಗೆಯೇ ಉಳಿಸಿಕೊಳ್ಳುವಂತೆಯೂ ಮನವಿ ಮಾಡಿದ್ದರು.

ಈ ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು.

1986ರಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಲಾಯಿತು.

ರಾಮನಗರ ಪಟ್ಟಣವನ್ನು ಕೇಂದ್ರವಾಗಿಟ್ಟುಕೊಂಡು ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕುಗಳನ್ನು ಸೇರಿಸಿಕೊಂಡು ಹೊಸದಾಗಿ ರಾಮನಗರ ಜಿಲ್ಲೆಯನ್ನಾಗಿ 2007ರಲ್ಲಿ ಘೋಷಿಸಲಾಯಿತು.

ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ 2007ರಲ್ಲಿ ಘೋಷಿಸಲಾಯಿತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!