Monday, May 6, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ₹3 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಮಂಡ್ಯ ತಾಲೂಕಿನ ಎಲೆಚಾಕನಹಳ್ಳಿ ಗ್ರಾಮದ ಸ್ಕೂಲ್ ಮನೆಯಿಂದ ಪಟ್ಟಲದಮ್ಮ ದೇವಸ್ಥಾನ ಸೇರುವ ಲೋಕೋಪಯೋಗಿ ಇಲಾಖೆ ಅನುದಾನ 3 ಕೋಟಿ ರೂ.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚೆಸ್ಕಾಂ ಅಧ್ಯಕ್ಷ ಹಾಗೂ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಗುದ್ದಲಿ ಪೂಜೆ ನೆರವೇರಿಸಿದರು.

ಗ್ರಾಮೀಣ ಭಾಗದಲ್ಲಿ ರಸ್ತೆಗಳು ಅಭಿವೃದ್ಧಿಯ ಸಂಕೇತವಾಗಿದ್ದು ಈ ನಿಟ್ಟಿನಲ್ಲಿ ಎಲೆಚಾಕನಹಳ್ಳಿ ಗ್ರಾಮದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಶ್ರೀರಂಗಪಟ್ಟಣ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.

ಜನಸಾಮಾನ್ಯರ ಬದುಕು ಬದಲಾಗಬೇಕು,ಮಹಿಳೆಯರು ಸ್ವಾವಲಂಬಿಗಳಾಗಬೇಕು ಎಂದು ರಾಜ್ಯ ಸರ್ಕಾರ 5 ಗ್ಯಾರಂಟಿಗಳನ್ನೂ ಅನುಷ್ಠಾನಗೊಳಿಸಿದೆ. 60 ಸಾವಿರ ಕೋಟಿ ಹಣವನ್ನು ಯೋಜನೆಗಳಿಗೆ ಮೀಸಲಿಡುವ ಜತೆಗೆ ಅಭಿವೃದ್ಧಿ ಕೆಲಸಗಳಿಗೂ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು.

ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು,ರಸ್ತೆ, ಕುಡಿಯುವ ನೀರು, ವಿದ್ಯುತ್ ಪೂರೈಕೆಗೆ ಪ್ರಥಮ ಆದ್ಯತೆ ನೀಡಿದೆ.ಆ ನಿಟ್ಟಿನಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಬಿ.ಅಶೋಕ್ ಗೌಡ ಪಟೇಲ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸಾಕಮ್ಮ, ಸದಸ್ಯರಾದ ಸತೀಶ್, ರೇಖಾ,ಭಾಗ್ಯ, ಮಹದೇವಮ್ಮ, ಪ್ರಸನ್ನಚಾರಿ, ಗುತ್ತಿಗೆದಾರ ಭಾಸ್ಕರ್ ಸೇರಿದಂತೆ ಇತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!