ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ 12 ಕೋಟಿ ರೂ.ಹೆಚ್ಚು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಗುದ್ದಲಿ ಪೂಜೆ ನೆರವೇರಿಸಿದರು.
ಮಂಡ್ಯ ತಾಲೂಕಿನ ಉರಮಾರಕಸಲಗೆರೆ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ 1.50 ಕೋಟಿ ರೂ ವೆಚ್ಚದ ಕುಡಿಯುವ ನೀರಿನ ಕಾಮಗಾರಿ, ಗ್ರಾಮದ ಮಂಚಮ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ,
ರೈತರುಗಳಿಗೆ ಕೃಷಿ ಇಲಾಖೆಯಿಂದ ಯಂತ್ರೋಪಕರಣಗಳನ್ನು ವಿತರಿಸಿದರು.
ನೀರಾವರಿ ಇಲಾಖೆ ವತಿಯಿಂದ 10 ಕೋಟಿ ರೂ.ವೆಚ್ಚದಲ್ಲಿ ಕೊತ್ತತ್ತಿ ಹೋಬಳಿಯ ಎರಡನೇ ವೃತ್ತದ ವಿವಿಧ ಗ್ರಾಮಗಳಾದ ಲೋಕಸರ, ಹಳುವಾಡಿ, ಟಿ.ಮಲ್ಲಿಗೆರೆ, ಕೋಲ ಕಾರನದೊಡ್ಡಿ,ಸೂನಗಹಳ್ಳಿ, ಭೂತನಹೊಸೂರು, ಕಬ್ಬನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಚಲುವರಾಯಸ್ವಾಮಿ ನೇತೃತ್ವದಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜೊತೆಗೆ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇವೆ. ಭಾಗ್ಯಜ್ಯೋತಿ ಫಲಾನುಭವಿಗಳ ಬಾಕಿ ಹಣವನ್ನು ಮನ್ನಾ ಮಾಡಿರುವ ಏಕೈಕ ಸರ್ಕಾರ ಕಾಂಗ್ರೆಸ್ ಸರ್ಕಾರವಾಗಿದೆ ಎಂದು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ನಮ್ಮನ್ನು ಕೈಹಿಡಿಯಿರಿ,ಕೈ ಬಿಡುವ ಕೆಲಸ ಮಾಡಬೇಡಿ ನಿಮ್ಮೊಂದಿಗೆ ನಿರಂತರವಾಗಿದ್ದು,ರೈತಪರ ಇರುತ್ತೇವೆ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸೌಮ್ಯಶ್ರೀ, ಮುಖಂಡರಾದ ನಾಗರಾಜು, ಮರೀಗೌಡ,ಮಧು, ಶಿವಣ್ಣ, ರವಿಕುಮಾರ್, ಸಿದ್ದರಾಮೇಗೌಡ, ಕೆ.ಹೆಚ್.ನಾಗರಾಜು, ರಮೇಶ ಮಿತ್ರ, ಹೆಮ್ಮಿಗೆ ಸಿದ್ದಪ್ಪ, ಅಂಕರಾಜು, ಶಿವರಾಮ್, ಸುರೇಶ್, ರಾಮಚಂದ್ರ ಸೇರಿದಂತೆ ಇತರರು ಭಾಗವಹಿಸಿದ್ದರು.




