Thursday, September 19, 2024

ಪ್ರಾಯೋಗಿಕ ಆವೃತ್ತಿ

ಲೋಕಸಭಾ ಚುನಾವಣೆ ಮಂಡ್ಯ ಜನರ ಅಸ್ತಿತ್ವದ ಪ್ರಶ್ನೆ: ರಮೇಶ್ ಬಂಡಿಸಿದ್ದೇಗೌಡ

ಮಂಡ್ಯ ಜಿಲ್ಲೆಗೆ ಏನು ಕೊಡುಗೆ ಕೊಡದೆ ಇರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆ ನಮ್ಮದು ಎನ್ನುತ್ತಿದ್ದಾರೆ. ನಮ್ಮೆಲ್ಲರ ಅಸ್ತಿತ್ವದ ಪ್ರಶ್ನೆಯಾಗಿರುವ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಮತದಾರರು ಬೆಂಬಲಿಸಬೇಕು ಎಂದು ಚೆಸ್ಕಾಂ ಅಧ್ಯಕ್ಷ ಹಾಗೂ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.

ಮಂಡ್ಯ ತಾಲೂಕಿನ ಹಳುವಾಡಿ ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಚುನಾವಣಾ ಪ್ರಚಾರ ನೆಡೆಸಿ ಅವರು ಮಾತನಾಡಿದರು.

ಮಂಡ್ಯ ಲೋಕಸಭಾ ಚುನಾವಣೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿ ನಡುವೆ ನೇರ ಹಣಾಹಣಿ ಚುನಾವಣೆ ನಡೆಯಲಿದ್ದು ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಸಾಮಾನ್ಯ ಅಭ್ಯರ್ಥಿ ಅಲ್ಲ ಎರಡು ಬಾರಿ ಮುಖ್ಯಮಂತ್ರಿ ಆಗಿರುವವರು, ನಮ್ಮ ಅಭ್ಯರ್ಥಿ ಜಿಲ್ಲೆಯ ಮಣ್ಣಿನ ಮಗ ಸ್ಟಾರ್ ಚಂದ್ರು ಅವರಿಗೆ ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ನಿಮ್ಮಲ್ಲಿರುವ ಸಣ್ಣ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು.ಕೊತ್ತತ್ತಿ ಹೋಬಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಐದು ಸಾವಿರ ಮತಗಳ ಲೀಡ್ ಕೊಡಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪಿ ಹೋಗಿದ್ದಾರೆ ಎಂದು ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮನಸ್ಥಿತಿ ಯಾವ ರೀತಿ ಇದೇ ಎಂದು ಜನರು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಏ.17ರಂದು ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರ ಪರ ಪ್ರಚಾರ ಮಾಡಲು ಎಐಸಿಸಿ ಮುಖಂಡ ರಾಹುಲ್ ಗಾಂಧಿಯವರು ಮಂಡ್ಯ ನಗರಕ್ಕೆ ಆಗಮಿಸುತ್ತಿದ್ದು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಏಪ್ರಿಲ್ 18ರಂದು ಕೊತ್ತತ್ತಿ ಹೋಬಳಿಯ ತಗ್ಗಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಚುನಾವಣಾ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ ತಮ್ಮ ಗ್ರಾಮಗಳಿಗೆ ಬರುವಾಗ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಜು, ಕೋಲಕಾರನದೊಡ್ಡಿ ನಾಗರಾಜು,ರಮೇಶ್ ಮಿತ್ರ,ಮಂಜುನಾಥ್, ಕೃಷ್ಣ, ಶಿವಣ್ಣ, ಮಂಜು,ಕಿಟ್ಟಿ, ಯಶೋಧ ಸೇರಿದಂತೆ ಇತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!