Wednesday, November 18, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಮೂಲ ಕಾಂಗ್ರೆಸ್ಸಿಗರ ಕಡೆಗಣನೆ  

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಬಂಡಿಸಿದ್ದೇಗೌಡ ಮೂಲ ಕಾಂಗ್ರೆಸಿಗರ ಕಡೆಗಣನೆಗೆ ಮುಂದಾಗಿದ್ದು, ತಾವು ಸ್ಪರ್ಧಿಸಿರುವ ಪಕ್ಷದ ಬಗ್ಗೆ ಗೌರವವಿಲ್ಲದ ಬಾಬು ಸೋಲುವುದು ನಿಶ್ಚಿತ ಎಂದು ಕಾಂಗ್ರೆಸ್ ಮುಖಂಡ ನೆಲಮನೆ ಸಿದ್ದಲಿಂಗೇಗೌಡ ಹೇಳಿದರು.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 36 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಶ್ರಮಿಸಿದ್ದ ಕಾಂಗ್ರೆಸ್ ಕಟ್ಟಾಳುಗಳನ್ನು ನಿರ್ಲಕ್ಷಿಸುವ ಪರಿಪಾಠ ಸರಿಯಲ್ಲ. ಮತಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಅಭ್ಯರ್ಥಿ, ಕಾಂಗ್ರೆಸ್ ಚಿಹ್ನೆಯನ್ನು ಮುಚ್ಚಿ ನನಗೆ ಮತ ಹಾಕಿ ಎಂದು ಮನವಿ ಮಾಡುತ್ತಿರುವುದು ನಿಷ್ಟಾವಂತ ಕಾಂಗ್ರೆಸಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೇಳಿಕೆಯಿಂದ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪಕ್ಷದ ನಾಯಕರು ಅವಮಾನಗೊಂಡಿದ್ದು, ರಮೇಶ್ ಬಾಬು ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿಸಿ, ಶಕ್ತಿ ಪ್ರದರ್ಶಿಸುವಂತೆ ತಾಕೀತು ಮಾಡಬೇಕಾಗಿತ್ತು. ನಾಯಕರ ಮೌನ ಕಾಂಗ್ರೆಸ್ ಕಟ್ಟಾಳುಗಳಿಗೆ ಅವಮಾನ ಮಾಡಿದಂತಾಗಿದೆ ಎಂದರು.

ಈ ಹಿಂದೆ 2 ಬಾರಿ ಶಾಸಕರಾಗಿದ್ದಾಗ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಆಸಕ್ತಿ ತೋರದೆ ಅಧಿಕಾರ ಇಲ್ಲದಿದ್ದಾಗ ಕಣ್ಣೀರು ಹಾಕುವ ರಮೇಶ್ ಬಾಬು ಅವರು ಪಕ್ಷದ ಬಂಡಾಯ ಅಭ್ಯರ್ಥಿ ಪಿ.ಹೆಚ್.ಚಂದ್ರಶೇಖರ್ ಅವರನ್ನು ಮನವೊಲಿಸಿ ನಾಮಪತ್ರ ಹಿಂಪಡೆಯಲು ಮುಂದಾಗಲಿಲ್ಲ, ಈ ಹಿನ್ನೆಲೆಯಲ್ಲಿ ಕಳೆದ ಬಾರಿ 48 ಸಾವಿರ ಮತಗಳ ಅಂತಹದಿಂದ ಸೋಲು ಕಂಡಿದ್ದರು. ಈ ಬಾರಿಯ ಚುನಾವಣೆ ಪುನರಾರ್ವತೆ ಆಗಲಿದೆ ಎಂದು ಎಚ್ಚರಿಸಿದರು.

ದೊಡ್ಡಪಾಳ್ಯ ಮಾಯೀಗೌಡ ಮಾತನಾಡಿ, ಕೆ.ಎಸ್.ನಂಜುಂಡೇಗೌಡರ ನಂತರ ಸಂಘಟನೆಯ ಅಭ್ಯರ್ಥಿಗಳು ಸ್ಪರ್ಧೆಗಿಳಿಯದ ಕಾರಣ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದ ಜೆಡಿಎಸ್ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಅವರನ್ನು ಮತದಾರರು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಮರಳಗಾಲ ಎಂ.ಸಿ.ಧನಂಜಯ, ದೊಡ್ಡಪಾಳ್ಯ ಮಂಜು, ಪ್ರಭಾಕರ್ ಕೆ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ