Friday, November 20, 2026

ಪ್ರಾಯೋಗಿಕ ಆವೃತ್ತಿ

ಜನರ ನಂಬಿಕೆ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ : ರಮೇಶ್ ಬಂಡಿಸಿದ್ದೇಗೌಡ

ಮಾಜಿ ಸಚಿವ ಬಂಡಿಸಿದ್ದೇಗೌಡರ ಕುಟುಂಬದ ಮೇಲೆ ಕೊತ್ತತ್ತಿ 1ನೇ ಹಾಗೂ 2ನೇ ವೃತ್ತದ ಜನರು ನಂಬಿಕೆ ಇಟ್ಟಿದ್ದೀರಿ ಆ ನಂಬಿಕೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಹೇಳಿದರು.

ಶ್ರೀರಂಗಪಟ್ಟಣ ವಿಧಾನಸಭಾ ವ್ಯಾಪ್ತಿಯ ತಗ್ಗಹಳ್ಳಿ ಗ್ರಾಮದಲ್ಲಿ 1 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಚೀರನಹಳ್ಳಿ ರಸ್ತೆಯಿಂದ ತಗ್ಗಹಳ್ಳಿ ಪುರ ಗ್ರಾಮಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಈಗಾಗಲೇ ಭೂತನ ಹೊಸೂರು ನಿಂದ ಕೆ.ಎಂ.ದೊಡ್ಡಿ ತನಕ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡುತ್ತೇವೆ ಎಂದು ಹೇಳಿದರು.

ಚೀರನಹಳ್ಳಿಯಿಂದ ಬೀರೇಶ್ವರ ದೇವಸ್ಥಾನದವರೆಗೂ ರಸ್ತೆ ಅಭಿವೃದ್ಧಿಗೆ ಅನುದಾನ ಲಭ್ಯವಾಗಿದ್ದು ಕೂಡಲೇ ಗುದ್ದಲಿ ಪೂಜೆ ಮಾಡುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮಂಜುನಾಥ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮಿತ್ರ ರಮೇಶ್, ತಗ್ಗಹಳ್ಳಿ ಕೃಷ್ಣ, ಇಂಜಿನಿಯರ್ ಸತೀಶ್ ಹಾಗೂ ಜಗದೀಶ್ ಇನ್ನಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ