Tuesday, May 14, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ಸ್ಟಾರ್ ಚಂದ್ರು ಜೊತೆ ರಮೇಶ್ ಬಂಡಿಸಿದ್ದೇಗೌಡ ಅಬ್ಬರದ ಪ್ರಚಾರ

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಶ್ರೀರಂಗಪಟ್ಟಣ ಕ್ಷೇತ್ರದ ನಾನಾ ಗ್ರಾಮ ಪಂಚಾಯತಿಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾರಸವಾಡಿಯಲ್ಲಿ ಸ್ಟಾರ್ ಚಂದ್ರು ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಈಡುಗಾಯಿಗಳನ್ನು ಒಡೆಯುವ ಮೂಲಕ ಸಂಭ್ರಮದಿಂದ ಬರಮಾಡಿಕೊಂಡರು.

ಈ ವೇಳೆ ಮಾತನಾಡಿ, ಕೊಟ್ಟ ಮಾತಿನಂತೆ ಕಾಂಗ್ರೆಸ್ ಗ್ಯಾರಂಟಿ ಜಾರಿಗೊಳಿಸಿದೆ. ಮತ್ತಷ್ಟು ಹೊಸ ಗ್ಯಾರಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಮತದಾರರು ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳನ್ನು ನೆನಪಿಸಿಕೊಳ್ಳಬೇಕು ಎಂದರು.

ಮಹಿಳೆಯರಿಗೆ ರಾಜ್ಯ ಸರ್ಕಾರ 2000 ನೀಡುತ್ತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ 2 ಸಾವಿರದ ಜೊತೆಗೆ ವರ್ಷಕ್ಕೆ 1 ಲಕ್ಷ ರೂ. ನೀಡಲಾಗುವುದು.‌ ಈ ಮೂಲಕ ಮಹಿಳೆಯರಿಗೆ ತಿಂಗಳಿಗೆ 10500 ರೂ. ಬರಲಿದೆ. ಇದು ಕುಟುಂಬ ನಿರ್ವಹಣೆಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ರೈತರಿಗೆ ಸಾಲಮನ್ನಾ, ಕನಿಷ್ಠ ಬೆಂಬಲ ಬೆಲೆ, ನರೇಗಾದ ಕೂಲಿ‌ 400 ರೂಪಾಯಿಗೆ ಹೆಚ್ಚಳ ಮಾಡುವುದು ಸೇರಿದಂತೆ ಹಲವು ಘೋಷಣೆಗಳನ್ನು ಕಾಂಗ್ರೆಸ್ ಮಾಡಿದೆ. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ ಎಂದು ರಮೇಶ್ ಬಾಬು ಬಂಡಿಸಿದ್ದೇಗೌಡ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಚಿದಂಬರ್, ಕಾರಸವಾಡಿ ಗ್ರಾಮದ ಮುಖಂಡರಾದ ತಿಬ್ಬೆಗೌಡ, ಉದಯ್ ಕುಮಾರ್, ರಾಜೇಶ್, ಸ್ವಾಮಿ ಕಲಾವಿದ, ಮಾಧು, ಶಿವಮಾಧು ಯುವಕರಾದ ರಾಘು,ಕಿರಣ್, ಸುಹಾಸ್ ಇನ್ನು ಇತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!