Monday, September 16, 2024

ಪ್ರಾಯೋಗಿಕ ಆವೃತ್ತಿ

ಮಧ್ಯಪ್ರದೇಶ| ಹಾಡಹಗಲೇ ಸಾರ್ವಜನಿಕವಾಗಿಯೇ ಮಹಿಳೆ ಮೇಲೆ ಅತ್ಯಾಚಾರ; ಎಲ್ಲೆಡೆ ಆಕ್ರೋಶ

ಕಾಮುಕನೊಬ್ಬ ಮಹಿಳೆಯ ಮೇಲೆ ಹಾಡಹಗಲೆ ಸಾರ್ವಜನಿಕ ಸ್ಥಳದಲ್ಲಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶ ಉಜ್ಜಯಿನಿಯಲ್ಲಿ ನಡೆದಿದೆ. ವಿಕೃತ ಕಾಮುಕ ಅತ್ಯಾಚಾರ ಎಸಗುತ್ತಿರುವುದನ್ನು ಕಂಡ ಜನರು ಮಹಿಳೆಯ ರಕ್ಷಣೆ ಬಾರದೆ, ಕೃತ್ಯವನ್ನು ನೋಡುತ್ತಾ ನಿಂತಿದ್ದರು ಎಂದು ಹೇಳಲಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಬುಧವಾರ ಮಧ್ಯಾಹ್ನ ಉಜ್ಜಯಿನಿಯ ಜನನಿಬಿಡ ಪ್ರದೇಶ ಕೋಯ್ಲಾ ಪಾಠಜಕ್‌ನಲ್ಲಿ ಪಾದಚಾರಿ ಮಾರ್ಗದ ಮೇಲೆಯೇ ಕಾಮುಕ ಮಹಿಳೆಯ ಮೇಲ ಅತ್ಯಾಚಾರ ಎಸಗಿದ್ದಾನೆ. ಕೃತ್ಯದ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೃತ್ಯವನ್ನು ಕಂಡ ಜನರು ಮಹಿಳೆಯ ರಕ್ಷಣೆಗೆ ಧಾವಿಸದೆ, ವಿಡಿಯೋ ಚಿತ್ರೀರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆಯನ್ನು ಪತ್ತೆ ಹಚ್ಚಿರುವ ಪೊಲೀಸರು, ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆಕೆಯಿಂದ ಹೇಳಿಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.

ನನ್ನನ್ನು ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿದ್ದ ಆರೋಪಿ ಲೋಕೇಶ್, ನನಗೆ ಬಲವಂತವಾಗಿ ಮದ್ಯ ಕುಡಿಸಿದ್ದ. ಬಳಿಕ, ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ” ಎಂದು ಸಂತ್ರಸ್ತೆ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಎಸಗಿ, ಬಳಿಕ ಸಂತ್ರಸ್ತೆಗೆ ಬೆದರಿಕೆವೊಡ್ಡಿ ಆರೋಪಿ ಲೋಕೇಶ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ಮಧ್ಯಪ್ರದೇಶದ ಉಜ್ಜಯಿನಿಯ ರಸ್ತೆಯಲ್ಲಿ ಹಗಲು ಹೊತ್ತಿನಲ್ಲಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ನಡೆದಿದೆ. ನೆರೆದಿದ್ದವರು ಸಹಾಯ ಮಾಡುವ ಬದಲು ಕೃತ್ಯವನ್ನು ವಿಡಿಯೋ ಮಾಡಿದ್ದಾರೆ. ಸಮಾಜ ಎತ್ತ ಸಾಗುತ್ತಿದೆ. ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಈ ಕೃತ್ಯ ನಡೆದಿದ್ದು, ಮುಖ್ಯವಾಹಿನಿಯ ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಘಟನೆ ಬಗ್ಗೆ ಮಾತನಾಡುತ್ತಿಲ್ಲ” ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!