Wednesday, November 18, 2026

ಪ್ರಾಯೋಗಿಕ ಆವೃತ್ತಿ

ನಟಿ ರಶ್ಮಿಕಾಗೆ ₹80 ಲಕ್ಷ ವಂಚಿಸಿದ ಆಪ್ತ ಸಹಾಯಕ

ಖ್ಯಾತ ನಟಿ ರಶ್ಮಿಕಾ ಮಂದಣ್ಣ ತಮ್ಮ ಆಪ್ತ ಸಹಾಯಕನಿಂದಲೇ ವಂಚನೆಗೊಳಗಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಳೆದ ಕೆಲ ವರ್ಷಗಳಿಂದ ನಟಿಗೆ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬರೋಬ್ಬರಿ 80 ಲಕ್ಷ ರೂಪಾಯಿ ಹಣವನ್ನು ವಂಚಿಸಿದ್ದಾನೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

2016ರಲ್ಲಿ ತೆರೆಕಂಡಿದ್ದ ಕನ್ನಡದ ʼಕಿರಿಕ್‌ ಪಾರ್ಟಿʼ ಸಿನಿಮಾ ಮೂಲಕ ಬೆಳ್ಳಿ ತೆರೆ ಪ್ರವೇಶಿಸಿದ್ದ ರಶ್ಮಿಕಾ ಮಂದಣ್ಣ, ಆರೇಳು ವರ್ಷಗಳ ಅವಧಿಯಲ್ಲಿ ತೆಲುಗು, ತಮಿಳು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿ ಬಹುಭಾಷಾ ನಟಿಯಾಗಿ ಜನಪ್ರಿಯತೆ ಗಳಿಸಿದ್ದಾರೆ. ಮೊದಲ ಚಿತ್ರದ ಯಶಸ್ಸಿನ ನಂತರ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದ ರಶ್ಮಿಕಾ, ತಮ್ಮ ಹಣಕಾಸಿನ ವ್ಯವಹಾರಗಳನ್ನು ನೋಡಿಕೊಳ್ಳುವ ಸಲುವಾಗಿ ಆಪ್ತ ಸಹಾಯಕನನ್ನು ನೇಮಿಸಿಕೊಂಡಿದ್ದರು. ಇದೇ ವ್ಯಕ್ತಿ ಸದ್ಯ 80 ಲಕ್ಷ ರೂಪಾಯಿ ಹಣವನ್ನು ವಂಚಿಸಿದ್ದಾನೆ. ಈ ವಿಚಾರ ತಿಳಿಯುತ್ತಲೇ ರಶ್ಮಿಕಾ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ರಶ್ಮಿಕಾ ಆಗಲಿ ಅಥವಾ ಅವರ ಕುಟುಂಬಸ್ಥರಾಗಲಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿಲ್ಲ. ರಾಷ್ಟ್ರೀಯ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವಂಚನೆಯ ಸುದ್ದಿ ಹರಿದಾಡಿದ ಬಳಿಕವೂ ರಶ್ಮಿಕಾ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿಲ್ಲ.

ಅಮಿತಾಭ್‌ ಬಚ್ಚನ್‌ ಮುಖ್ಯಭೂಮಿಕೆಯ ʼಗುಡ್‌ ಬೈʼ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ಇತ್ತೀಚೆಗೆ ಬಾಲಿವುಡ್‌ ಪ್ರವೇಶಿಸಿದ್ದ ರಶ್ಮಿಕಾ, ʼಮಿಶನ್‌ ಮಜನುʼ ಚಿತ್ರದಲ್ಲೂ ಮಿಂಚಿದ್ದರು. ಸದ್ಯ ರಣಭೀರ್‌ ಕಪೂರ್‌ ಅಭಿನಯದ ʼಅನಿಮಲ್‌ʼ‌ ಚಿತ್ರದಲ್ಲಿ ನಾಯಕಿಯ ಪಾತ್ರದಲ್ಲಿ ನಟಿಸುತ್ತಿದ್ದು, ಅಲ್ಲು ಅರ್ಜುನ್‌ ನಟನೆಯ ʼಪುಷ್ಪ-2ʼ ಚಿತ್ರದಲ್ಲೂ ತೊಡಗಿಸಿಕೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ