ಪ್ರಭು ವಿ ಎಸ್
ಪಡಿತರ ದಾಸ್ತಾನು ಗೋದಾಮುವಿನ ಬಾಗಿಲು ಮುರಿದು ಒಳ ಪ್ರವೇಶಿಸಿರುವ ದುಷ್ಕರ್ಮಿಗಳು ಅಪಾರ ಪ್ರಮಾಣದ ಅಕ್ಕಿ ಮೂಟೆಯನ್ನು ಕಳವು ಮಾಡಿರುವ ಘಟನೆ ಮದ್ದೂರು ಪಟ್ಟಣದಲ್ಲಿ ಮಂಗಳವಾರ ಬೆಳಗಿನ ಜಾವ ಜರುಗಿದೆ.
ಮದ್ದೂರು ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ ಕೆ ಎಫ್ ಸಿ ಎಸ್ ಸಿ ಗೋದಾಮಿನಲಿದ್ದ ಸುಮಾರು 94 ಮೂಟೆಯಲ್ಲಿದ್ದ ಸುಮಾರು 47 ಕ್ವಿಂಟಾಲ್ ಅಕ್ಕಿಯನ್ನು ಕಳವು ಮಾಡಿದ್ದಾರೆ.
ಮಂಗಳವಾರ ಬೆಳಿಗ್ಗೆ ಸುಮಾರು 2 ಗಂಟೆ ಸಮಯದಲ್ಲಿ ಮಿನಿ ಲಾರಿಯೊಂದಿಗೆ ಆಗಮಿಸಿದ ದುಷ್ಕರ್ಮಿಗಳು ಗೋದಮಿನ ಬೀಗ ಮುರಿದು ಒಳ ಪ್ರವೇಶಿಸಿ ಅಪಾರ ಪ್ರಮಾಣದ ಅಕ್ಕಿಯನ್ನು ಕಳವು ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಪತ್ತೆಯಾಗಿದೆ. ಗೋದಾಮಿನಲ್ಲಿ ದಾಸ್ತಾನು ಇಟ್ಟಿದ್ದ ಪಡಿತರ ಪದಾರ್ಥಗಳು ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಮಾಡಲು ಶೇಖರಣೆ ಮಾಡಿಟ್ಟಿದ್ದರೆನ್ನಾಗಿದೆ, ಸಂಬಂಧಿಸಿದ ಅಧಿಕಾರಿಗಳು ಕಚೇರಿಗೆ ಆಗಮಿಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ, ಆಹಾರ ನಾಗರಿಕ ಸರಬರಾಜು ಜಂಟಿ ನಿರ್ದೇಶಕ ಎಂ.ಪಿ.ಕೃಷ್ಣಕುಮಾರ್, ವೃತ್ತ ನಿರೀಕ್ಷಕ ಶಿವಕುಮಾರ್ ಹಾಗೂ ಆಹಾರ ಇಲಾಖೆಯ ಶಿರಸ್ತೆದಾರ್ ಹಾಗೂ ಇತರ ಇಲಾಖೆ ಅಧಿಕಾರಿಗಳು ಘಟನಾಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗೋದಾಮು ವ್ಯವಸ್ಥಾಪಕ ನಟರಾಜ್ ನೀಡಿದ ದೂರಿನ ಮೇರೆಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಅಗತ್ಯ ಕ್ರಮವಹಿಸಿದ್ದಾರೆ.




