ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಕಾರ್ಯಕ್ರಮವನ್ನು ಮಂಡ್ಯನಗರ ಬಾಲಕಿಯರ ಸರ್ಕಾರಿ ಕಾಲೇಜು (ಕಲ್ಲುಕಟ್ಟಡ) ಆವರಣದಲ್ಲಿ ಜೂ.24ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಶಾಸಕ ರವಿಕುಮಾರ್ ಗಣಿಗ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.




