Wednesday, September 18, 2024

ಪ್ರಾಯೋಗಿಕ ಆವೃತ್ತಿ

ಓದುವ ಹವ್ಯಾಸ ಅಳವಡಿಸಿಕೊಂಡು ಸೃಜನಶೀಲರಾಗಿ : ರವಿಕುಮಾರ್

ವಿದ್ಯಾರ್ಥಿಗಳು, ಪುಸ್ತಕಗಳು ಹಾಗೂ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಜೀವನದಲ್ಲಿ ಅಳವಡಿಸಿಕೊಂಡು ಸೃಜನಶೀಲರಾಗಿ ಮುನ್ನಡೆಯಬೇಕು ಎಂದು ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರವಿಕುಮಾರ್ ಚಾಮಲಾಪುರ ಹೇಳಿದರು.

ಕೆ.ಆರ್.ಪೇಟೆ ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಕನ್ನಡ ರಾಜ್ಯೋತ್ಸವ ಅಂಗವಾಗಿ ಇಂದು ಆಯೋಜಿಸಿದ್ದ 34ನೇ ವರ್ಷದ ಶಾಲೆಗೊಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಶಾಲೆಯ ಪಠ್ಯ ಪುಸ್ತಕಗಳ ಅಭ್ಯಾಸದ ಜೊತೆಗೆ ಕನ್ನಡ ಸಾಹಿತಿಗಳು, ಹೋರಾಟಗಾರರು ಹಾಗೂ ಸಮಾಜಕ್ಕೆ ಕೊಡುಗೆ ನೀಡಿರುವ ಸಾಧಕರ ಜೀವನ ಚರಿತ್ರೆಯನ್ನು ಓದಿ ಲೋಕಜ್ಞಾನವನ್ನು ಮೈಗೂಡಿಸಿಕೊಂಡು ತಮ್ಮ ವ್ಯಕ್ತಿತ್ವವನ್ನು ಸಮಗ್ರವಾಗಿ ವಿಕಸನಗೊಳಿಸಿಕೊಂಡು ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ತಹಶೀಲ್ದಾರ್ ಎಂ.ವಿ.ರೂಪ ಕಾರ್ಯಕ್ರಮ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಅರ್.ಎಸ್.ಸೀತಾರಾಮ್ ಕೃಷ್ಣರಾಜ ನುಡಿ ಮಾಸಿಕ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ವಿಶ್ರಾಂತ ಪ್ರಾಂಶುಪಾಲ ಕುಮಾರಸ್ವಾಮಿ ಅವರು ಎ.ಎಸ್.ಮೂರ್ತಿ ಅವರ ಜೀವನ ಸಾಧನೆಗಳು, ರಂಗನಾಟಕ ಕೃತಿಗಳು ಹಾಗೂ ಅವರ ಸಮಾಜಮುಖಿ ಅಭಿವ್ಯಕ್ತಿ ಕುರಿತು ಮಾತನಾಡಿದರು.

ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಎಸ್.ಧರ್ಮಪ್ಪ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ಉಪನ್ಯಾಸಕರ ಸಂಘದ ಅಧ್ಯಕ್ಷ ಹೆಚ್.ಟಿ.ಗಿರೀಶ್, ಡಾ.ಶ್ರೀನಿವಾಸಶೆಟ್ಟಿ, ಕೆ.ಎಸ್.ಸೋಮಶೇಖರ್, ಕೆ.ಆರ್.ನೀಲಕಂಠ, ಹರಿಚರಣತಿಲಕ್, ಡಾ.ಕೆ.ಎಸ್.ರಾಜೇಶ್ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!