Thursday, November 19, 2026

ಪ್ರಾಯೋಗಿಕ ಆವೃತ್ತಿ

ಲಂಚ ಆರೋಪ| ಯಾವುದೇ ತನಿಖೆಗೆ ಸಿದ್ದ ಎಂದ ಸಚಿವ ಚಲುವರಾಯಸ್ವಾಮಿ

ಸಚಿವ ಚಲುರಾಯಸ್ವಾಮಿ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂಬ ದೂರು ರಾಜ್ಯಪಾಲರ ಅಂಗಳ ತಲುಪಿರುವ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಾನು ಲಂಚಕ್ಕೆ ಬೇಡಿಕೆ ಇಟ್ಟಿದ್ದೇ ಆದರೆ ಮುಖ್ಯಮಂತ್ರಿಗಳು ಯಾವುದೇ ತನಿಖೆ ನಡೆಸಿ, ಸತ್ಯಾಂಶ ತಿಳಿದು ಕೊಳ್ಳಲಿ ಎಂದು ಮಂಡ್ಯದಲ್ಲಿ ಪ್ರತಿಕ್ರಿಯಿಸಿದ್ದಾರೆ.

“>

ಮಂಡ್ಯ ಜಿಲ್ಲೆಯ ಅಧಿಕಾರಿಗಳು ನೀಡಿರುವ ದೂರು ಎಂದು ಪ್ರಸಾರವಾಗಿರುವ ವರದಿ ಸತ್ಯಕ್ಕೆ ದೂರವಾಗಿದೆ. ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು,ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ  ಎಂದು ಸಂಶಯ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಇಂತಹ ಪ್ರಯತ್ನ ಮಾಡುತ್ತಲೇ ಬಂದಿದ್ದು, ಇದು ಹತಾಶೆ ಮನೋಭಾವವಾಗಿದೆ. ನಕಲಿ ದೂರು ಪತ್ರ ಸೃಷ್ಟಿಸಿ ಉದ್ದೇಶ ಪೂರ್ವಕವಾಗಿ ಕೆಟ್ಟ ಹೆಸರು ತರಲು ಇಂತಹ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ