Thursday, September 19, 2024

ಪ್ರಾಯೋಗಿಕ ಆವೃತ್ತಿ

ತಾಲ್ಲೂಕು ಮಟ್ಟದಲ್ಲೇ ಅಹವಾಲು ಪರಿಹರಿಸಲು ಸಿದ್ದ- ಡಾ.ಕುಮಾರ

ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಸಾರ್ವಜನಿಕ ಅಹವಾಲುಗಳನ್ನು ತಾಲ್ಲೂಕು ಮಟ್ಟದಲ್ಲಿಯೇ ಪರಿಹರಿಸಲು ಜಿಲ್ಲಾಡಳಿತ ಬದ್ದ ಎಂದು ಜಿಲ್ಲಾಧಿಕಾರಿ ಡಾ.ಕುಮಾರರವರು ತಿಳಿಸಿದ್ದರು.

ಮಂಡ್ಯ ತಾಲ್ಲೂಕು ಕಚೇರಿ ಆವರಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ವಾರದಲ್ಲಿ ಒಂದು ದಿನ ಒಂದು ತಾಲ್ಲೂಕಿಗೆ ಭೇಟಿ ನೀಡಿ. ಅಲ್ಲಿನ ಸಾರ್ವಜನಿಕರ ಸಮಸ್ಯೆಗಳನ್ನು ಅರಿತು ಅದಕ್ಕೆ ಪ್ರತಿಯಾಗಿ ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಮಾಲೋಚಿಸಿ ಸ್ಥಳದಲ್ಲಿಯೇ ಸೂಕ್ತ ಪರಿಹಾರ ನೀಡಲಾಗುವುದು. ಒಂದು ವೇಳೆ ಸ್ಥಳದಲ್ಲಿಯೇ ಪರಿಹರಿಸಲು ಸಾಧ್ಯವಾಗದಿದ್ದರೆ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಮುಂದಿನ ಹಂತಕ್ಕೆ ಅಹವಾಲುಗಳನ್ನು ಕಳುಹಿಸಿಕೊಡಲಾಗುವುದು ಎಂದರು.

ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಸಾರ್ವಜನಿಕರಿಂದ ಹೆಚ್ಚಾಗಿ ಕೇಳಿ ಬರುವುದರಿಂದ ಈಗಾಗಲೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸಲಹೆ – ಸೂಚನೆಗಳನ್ನು ನೀಡಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಗ್ರಾಮ ಮಟ್ಟದಲ್ಲಿಯೇ ಪೌತಿ ಖಾತೆ ಆಂದೋಲನವನ್ನು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಪೌತಿ ಖಾತೆ ಕೆಲಸಗಳು ಇನ್ನು ಬೇಗನೆ ನಡೆಯಲಿವೆ ಎಂದರು .

ಸರಿಸುಮಾರು 15,000 ವೃತಪಟ್ಟ ರೈತರ ಹೆಸರಿನಲ್ಲೇ RTCಗಳು ಇದ್ದು ಅವುಗಳ ಹೆಸರನ್ನು ಬದಲಿಸಲು ತಹಶೀಲ್ದಾರ್ ರವರೆ ಗ್ರಾಮಪಂಚಾಯಿತಿಗೆ ಭೇಟಿ ನೀಡಿ ಅವರ ಅರ್ಜಿಗಳನ್ನು ಸ್ವೀಕರಿಸಿ ಪೌತಿ ಖಾತೆಯನ್ನು ಮಾಡಿಕೊಡುತ್ತಾರೆ ಎಂದರು.

75ನೇ ಸ್ವಾತಂತ್ರ್ಯ ಮಹೋತ್ಸವ ಅಂಗವಾಗಿ 75 ಕಂದಾಯ ಗ್ರಾಮಗಳನ್ನು ಅಯ್ಕೆ ಮಾಡಿಕೊಂಡಿದ್ದು ಅವುಗಳನ್ನು ಅಮೃತ ಕಂದಾಯ ಗ್ರಾಮ ಎಂದು ಸುತ್ತೋಲೆ ಹೊರಡಿಸಿ ಆ ಗ್ರಾಮಗಳ ಯಾವುದೇ ಸಮಸ್ಯೆಗಳಿದ್ದರೆ ಏಕ ಕಾಲದಲ್ಲಿ ಪರಿಹರಿಲಾಗುವುದು ಎಂದರು.

ಜಿಲ್ಲೆಯಲ್ಲಿ ಸರ್ಕಾರಿ ಜಾಗ ಮಂಜೂರಾತಿ ಹಾಗೂ ದುರಸ್ತಿ ಸಂಬಂಧಿಸಿದಂತೆ ಅನೇಕ ದೂರುಗಳು ಇದ್ದು ಅವುಗಳನ್ನು ಕೂಡ ಪರಿಹರಿಸಲು ಬದ್ದ ಎಂದರು. ಅನಗತ್ಯವಾಗಿ ಸಾರ್ವಜನಿಕರ ಅಲೆದಾಟ ತಪ್ಪಿಸುವುದು ಹಾಗೂ ಅವರಿಗೆ ಸೂಕ್ತ ಪರಿಹಾರ ಒದಗಿಸುವುದು ನಮ್ಮ ಕರ್ತವ್ಯ ಎಂದರು.

140 ಅರ್ಜಿಗಳ ಸ್ವೀಕಾರ

ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ 140 ಅರ್ಜಿಗಳನ್ನು ಸ್ವೀಕರಿಸಲಾಯಿತು. ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಿ.ಪಂ. ಉಪ ಕಾರ್ಯದರ್ಶಿ (ಆಡಳಿತ) ಬಾಬು, ಡಿಎಸ್-2 ಆನಂದ್ ಕುಮಾರ್, ತಾಲೂಕು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್, ನಗರಸಭೆ ಪೌರಯುಕ್ತ ಮಂಜುನಾಥ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!