Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಜನಾಭಿಪ್ರಾಯ ಕಾಂಗ್ರೆಸ್ ಪಕ್ಷದ ಪರವಾಗಿದೆ: ಗಣಿಗ ರವಿಕುಮಾರ್

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜನಾಭಿಪ್ರಾಯ ಕಾಂಗ್ರೆಸ್ ಪಕ್ಷದ ಪರವಾಗಿದ್ದು, ನಾನು 15,000 ಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪಿ. ರವಿಕುಮಾರ್ ಗಣಿಗ ತಿಳಿಸಿದರು.

ನುಡಿ ಕರ್ನಾಟಕ. ಕಾಮ್ ಜೊತೆ ಮಾತನಾಡಿದ ಅವರು, ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತ ಮತ್ತು ಜೆಡಿಎಸ್ ಪಕ್ಷದ ಸುಳ್ಳುಗಳಿಂದ ಕ್ಷೇತ್ರದ ಜನರು ಬೇಸರಗೊಂಡಿದ್ದರು.

ಕಾಂಗ್ರೆಸ್ ಪಕ್ಷ ನೀಡಿರುವ ಪ್ರಣಾಳಿಕೆ ಹಾಗೂ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದ ಜನರ ಮನಸ್ಸನ್ನು ಮುಟ್ಟಿದ್ದು, ನಾನು ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸುವುದು ಖಚಿತ.ಇದಕ್ಕಾಗಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕಳೆದ ಐದು ವರ್ಷಗಳಿಂದ ಕ್ಷೇತ್ರದ ಜನರ ಮಧ್ಯೆ ಇದ್ದು,ಅವರ ಕಷ್ಟ-ಸುಖದಲ್ಲಿ ಭಾಗಿಯಾಗಿರುವುದು ಹಾಗೂ ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ ಅಭಿವೃದ್ಧಿ ಭರವಸೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ.ನನ್ನ ಪರ ಹಗಲಿರುಳು ದುಡಿದ ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಅನಂತ ಅನಂತ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!