Saturday, May 18, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ 5ನೇ ಗ್ಯಾರಂಟಿ; ಡಿ.26ರಿಂದ ”ಯುವನಿಧಿ”ಗೆ ನೋಂದಣಿ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆಯ ಜಾರಿಗೆ ಸಿದ್ದತೆ ನಡೆದಿದ್ದು, ನೋಂದಣಿ ಪ್ರಕ್ರಿಯೆಗೆ ಡಿಸೆಂಬರ್ 26ರಂದು ಚಾಲನೆ ದೊರೆಯಲಿದೆ.

ಪದವಿ ಪಡೆದು ಉದ್ಯೋಗದ ಹುಡುಕಾಟ ನಡೆಸುತ್ತಿರುವ ಯುವಜನರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸಿ, ಇಷ್ಟದ ಉದ್ಯೋಗ ಪಡೆಯಲು ನೆರವಾಗುವ ಸದುದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅರ್ಹ ಫಲಾನುಭವಿಗಳೆಲ್ಲರೂ ಅರ್ಜಿ ಸಲ್ಲಿಸುವ ಮೂಲಕ ಯೋಜನೆಯ ಸದುಪಯೋಗ ಪಡೆಯಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಯಾರು ಅರ್ಜಿ ಸಲ್ಲಿಸಬಹುದು

  • ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗ ಅಭ್ಯರ್ಥಿಗಳು
  • 2023ರ ವರ್ಷದಲ್ಲಿ ತೇರ್ಗಡೆಯಾಗಿದ್ದು, ಉತ್ತೀರ್ಣರಾಗಿ 180 ದಿನಗಳು ಕಳೆದರೂ ಉದ್ಯೋಗ ಇಲ್ಲದವರು
  • ಅರ್ಜಿ ಸಲ್ಲಿಸಿದ ದಿನದಿಂದ ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ಈ ಭತ್ಯೆ ದೊರೆಯಲಿದೆ.
  • ‘ಸೇವಾ ಸಿಂಧು’ ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು 
  • ನೇರ ಬ್ಯಾಂಕ್ ವರ್ಗಾವಣೆ ಮೂಲಕ ಭತ್ಯೆ ನೀಡಲಾಗುವುದು
  • ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಿಸಬೇಕು
  • ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ಪಾವತಿಸಬೇಕು 
  • ಅಭ್ಯರ್ಥಿಗಳು ಅರ್ಜಿ ಹಾಕುವ ವೇಳೆ ತಾವು ಉತ್ತೀರ್ಣರಾದ ದಿನದಿಂದ 6 ತಿಂಗಳವರೆಗಿನ ಸ್ಟೇಟ್‌ಮೆಂಟ್ ಪ್ರತಿ ನೀಡಬೇಕು 
  • ಪದವಿ, ಡಿಪ್ಲೊಮಾ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದರೆ ಈ ಭತ್ಯೆಗೆ ಅರ್ಹರಾಗುವುದಿಲ್ಲ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!