Sunday, May 19, 2024

ಪ್ರಾಯೋಗಿಕ ಆವೃತ್ತಿ

ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ

ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಶ್ರೀರಂಗಪಟ್ಟಣ ತಾಲ್ಲೂಕಿನ ಚಿಕ್ಕಅಂಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನರನ್ನು ಮಾಸಿಕ ಗೌರವಧನ ಪಾವತಿ ಆಧಾರದ ಮೇಲೆ ಚಿಕ್ಕಅಂಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಸ್ಥಳೀಯ ವಿಕಲಚೇತನರನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ. ಉತ್ತೀರ್ಣ, ಹಾಗೂ ಅನುತ್ತೀರ್ಣರಾದ 18 ರಿಂದ 45 ವರ್ಷದೊಳಗಿನ ವಿಕಲಚೇತನರು ನವೆಂಬರ್ 30 ರೊಳಗಾಗಿ ಶ್ರೀರಂಗಪಟ್ಟಣ, ತಾಲ್ಲೂಕು ಪಂಚಾಯತ್ ಕಾರ್ಯಾಲಯ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಜೆ.ಎಸ್.ಕೃಷ್ಣ ಇವರಿಂದ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ (ಜೆ.ಎಸ್.ಕೃಷ್ಣ) ಮೊ.8453609826 ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಪ್ರಕಟಣೆ ತಿಳಿಸಿದೆ.

ಸಹಾಯಧನ ಅರ್ಜಿ ಆಹ್ವಾನ
ಮದ್ದೂರು ಟೌನ್ ಪುರಸಭೆಯ ವ್ಯಾಪ್ತಿಯ ನಗರದಲ್ಲಿ ವಾಸವಾಗಿರುವ ಅರ್ಹ ವಿಶೇಷ ಚೇತನ ಫಲಾನುಭವಿಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ ಹಂತ-4ರಡಿ ಶೇ.5ರ ಕಾರ್ಯಕ್ರಮದಡಿ ವಿಶೇಷ ಚೇತನರಿಗೆ ಕ್ರಿಯಾ ಯೋಜನೆಯಲ್ಲಿ ಅನುಮೋದನೆಯಾದಂತೆ ಸ್ವಯಂ ಉದ್ಯೋಗ ಮಾಡಲು ಬ್ಯಾಂಕಿನಿಂದ ಸಾಲ ಪಡೆಯುವವರಿಗೆ ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
20ರಿಂದ60 ವರ್ಷ ವಯೋಮಾನದ ಶೇ.75ರಷ್ಟು ದೈಹಿಕ ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ಖರೀದಿಸಿ ನೀಡಲು ಅಥವಾ ಖರೀದಿಸಲು ಸಹಾಯಧನ ನೀಡಲು ಹಾಗೂ ವಿಶೇಷ ಚೇತನರಿಗೆ ಶಸ್ತ್ರ ಚಿಕಿತ್ಸೆ ಮತ್ತು ಇತರೆ ಸಾಧನ ಸಾಮಾಗ್ರಿಗಳನ್ನು ಖರೀದಿಸಿ ನೀಡಲು ಅಥವಾ ಖರೀದಿಸಲು ಸಹಾಯಧನ ನೀಡಲಾಗುವುದು.
ಆಸಕ್ತರು ನವೆಂಬರ್ 29 ರೊಳಗಾಗಿ ಪುರಸಭಾ ಕಚೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಪುರಸಭಾ ಕಛೇರಿಯ ಯೋಜನಾ ಶಾಖೆಯ ದೂ.ಸಂ.08232-232600/236222 ಸಂಪರ್ಕಿಸಬಹುದೆಂದು ಮದ್ದೂರು ಪುರಸಭೆ ಮುಖ್ಯಾಧಿಕಾರಿ ಅಶೋಕ್ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!