Wednesday, September 18, 2024

ಪ್ರಾಯೋಗಿಕ ಆವೃತ್ತಿ

ಜುಲೈ 6 ರಂದು ದೇಜಗೌ ಗ್ರಂಥ ಬಿಡುಗಡೆ

ಜನಮನ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜುಲೈ 6 ರಂದು ಮಂಡ್ಯ ನಗರದ ಗಾಂಧಿಭವನದಲ್ಲಿ ದೇಜಗೌ ಗ್ರಂಥ ಬಿಡುಗಡೆ ಸಮಾರಂಭ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಸಿ.ಪುಟ್ಟಸ್ವಾಮಿ ಚಿಕ್ಕಹಾರೋಹಳ್ಳಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ, ನಾಡೋಜ ಡಾ.ಮಹೇಶ್ ಜೋಷಿ ಗ್ರಂಥ ಬಿಡುಗಡೆ ಮಾಡುವರು. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಕೆ.ರವಿಕುಮಾರ್ ಚಾಮಲಾಪುರ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ಟಿ.ವೀರಪ್ಪ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ದೇಜಗೌ ಕನ್ನಡದ ಕಟ್ಟಾಳಾಗಿ, ಜೀವನದುದ್ದಕ್ಕೂ ರಾಷ್ಟ್ರಕವಿ ಕುವೆಂಪುರವರ ಮಾರ್ಗದರ್ಶನದಲ್ಲಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದವರು. ಹಲವು ಸಂದರ್ಭದಲ್ಲಿ ಕನ್ನಡ ಭಾಷೆ ಉಳಿವಿಗಾಗಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು ಎಂದರು.

ಕನ್ನಡ ಶಾಸ್ತ್ರೀಯ ಭಾಷೆ ಸ್ಥಾನ-ಮಾನದ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದವರು. ದೇಜಗೌ ಅವರಿಗೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಅವರ ಗ್ರಂಥ ರಚಿಸಲಾಗಿದ್ದು, ಕೊರೊನಾ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಿರಲಿಲ್ಲ ಎಂದರು.

ನಿವೃತ್ತ ಪ್ರಾಂಶುಪಾಲ ಜಿ.ಟಿ.ವೀರಪ್ಪ ಮಾತನಾಡಿ, ಹಲವು ಲೇಖಕರು ದೇಜಗೌ ಅವರ ಬಗ್ಗೆ ಬರೆದಿರುವ ಲೇಖನಗಳ ಸಂಕಲನ ಗ್ರಂಥ ಇದಾಗಿದೆ ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!