Saturday, May 18, 2024

ಪ್ರಾಯೋಗಿಕ ಆವೃತ್ತಿ

ಸಂಸ್ಕಾರದ ಶಿಕ್ಷಣ ಪಡೆದರೇ ಸಮಾಜದಲ್ಲಿ ಸೌಹಾರ್ದತೆ: ಡಾ.ಮೂರ್ತಿ

ಆಧುನಿಕ ಜೀವನದಲ್ಲಿ ಶಿಕ್ಷಣ ಪ್ರತಿಯೊಬ್ಬರಿಗೂ ಅತ್ಯವಶ್ಯಕವಾಗಿದೆ, ಓದಿನಿಂದಲೇ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ, ಆದರೇ ಸಂಸ್ಕಾರದ ಶಿಕ್ಷಣ ಪಡೆದರೇ ಮಾತ್ರ ಸಮಾಜದಲ್ಲಿ ಸೌಹಾರ್ದತೆಯಿಂದ ಬದುಕಲು ಸಾಧ್ಯವಾಗುತ್ತದೆ ಎಂದು ಆದರ್ಶ ವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ಡಾ. ಮೂರ್ತಿ ತಿಳಿಸಿದರು.

ಮಳವಳ್ಳೀ ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗೇಟ್ ಬಳಿ ನೂತನವಾಗಿ ಆರಂಭಿಸಿರುವ ಎಂ.ಜೆ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ಜೀವನದಲ್ಲಿ ಶಿಕ್ಷಣ ಪ್ರತಿಯೊಬ್ಬರಿಗೂ ಅತ್ಯವಶ್ಯಕವಾಗಿದೆ, ಓದಿನಿಂದಲೇ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ, ಆದರೇ ಸಂಸ್ಕಾರದ ಶಿಕ್ಷಣ ಪಡೆದರೇ ಮಾತ್ರ ಸಮಾಜದಲ್ಲಿ ಸೌಹರ್ಧತೆಯಿಂದ ಬದುಕಲು ಸಾಧ್ಯವಾಗುತ್ತದೆ ಎಂದರು.

ವೈದ್ಯಕೀಯ, ಐಎಎಸ್ ಐಪಿಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನೂತನ ಆರಂಭಿಸಿರುವ ಕಾಲೇಜಿಗೆ ವಿಜ್ಞಾನ ಪ್ರಯೋಗಾಲಯ, ಈಜು ಕೋಳ, ಆಟದ ಮೈದಾನ ಸೇರಿದಂತೆ ಆಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಸಹಾಯಕ ಪ್ರಾಧ್ಯಾಪಕ ಡಾ. ಶಂಕರಮೂರ್ತಿ ಮಾತನಾಡಿ, ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಸಿಗಬೇಕೆಂಬ ಹಂಬಲದೊAದಿಗೆ ಡಾ.ಮೂರ್ತಿ ಮಳವಳ್ಳಿಯಲ್ಲಿ ಶಿಕ್ಷಣಸಂಸ್ಥೆಗಳನ್ನು ಸ್ಥಾಪಿಸಿರುವುದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ, ಎಲ್‌ಕೆಜಿಯಿಂದ ಪಿಯುಸಿ ವರೆಗೆ ಒಂದೇ ಕ್ಯಾಂಪಸ್‌ನಲ್ಲಿ ಶಿಕ್ಷಣ ಪಡೆಯಲು ಅನುಕೂಲ ಮಾಡಿಕೊಟ್ಟ ಡಾ. ಮೂರ್ತಿಯರವರ ಸೇವೆ ಅನನ್ಯವಾಗಿದ್ದು, ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಸಿಗುವಂತಾಗಲಿ ಎಂದು ಆಶೀಸಿದರು.

ಇದೇ ಸಂದರ್ಭದಲ್ಲಿ ಜಯಲಕ್ಷ್ಮಿ ಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರ ವೈಎಸ್‌ಮೂರ್ತಿ, ಆಡಳಿತಾಧಿಕಾರಿ ಚಲುವರಾಜು, ನಟರಾಜು ಸೇರಿದಂತೆ ಉಪನ್ಯಾಸಕರು ಮತ್ತು ಆದರ್ಶ ಸಮೂಹ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!