Thursday, April 18, 2024

ಪ್ರಾಯೋಗಿಕ ಆವೃತ್ತಿ

ಸಂವಿಧಾನ ಬದ್ದವಾಗಿ ಪ್ರತಿಯೊಬ್ಬರು ಜೀವಿಸಬೇಕು: ನರೇಂದ್ರಸ್ವಾಮಿ

ಸಂವಿಧಾನದ ಮೂಲಕ ಸ್ವತಂತ್ರ ಹಾಗೂ ಭದ್ರತೆಯನ್ನು ಸ್ಥಾಪಿಸಲಾಗಿದೆ, ನಮ್ಮ ಸಂವಿಧಾನದ ಬಗ್ಗೆ ಹೆಮ್ಮೆ ಪಡುವಂತಾಗಿದೆ, ಸಂವಿಧಾನ ಬದ್ದವಾಗಿ ಪ್ರತಿಯೊಬ್ಬರು ಬದುಕಬೇಕೆಂದು ಶಾಸಕ ಪಿಎಂ ನರೇಂದ್ರಸ್ವಾಮಿ ಹೇಳದರು.

ಮಳವಳ್ಳಿ ಪಟ್ಟಣದ ಭಕ್ತಕನಕದಾಸ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಣರಾಜೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯದೊಂದಿಗೆ ಬದುಕನ್ನು ಸಂವಿಧಾನ ಮೂಲ ಕಾರಣವಾಗಿದೆ, ಸ್ವಾತಂತ್ರö್ಯ ಬಂದ ನಂತರ ಯಾವ ರೀತಿಯಲ್ಲಿ ದೇಶದ ಆಳ್ವಿಕೆ ನಡೆಯಬೇಕೆಂದು ತಿಳಿಸಿಕೊಡುವುದೇ ಸಂವಿಧಾನವಾಗಿದೆ, ಬಾಬಾ ಸಾಹೇಬರ ಅದರ್ಶಗಳು ಇಂದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು.

ಸ್ವಾತಂತ್ರ‍್ಯ ಬಂದಾಗ ದೇಶದಲ್ಲಿ 35 ಕೋಟಿ ಜನಸಂಖ್ಯೆ ಇದ್ದ ಸಂದರ್ಭದಲ್ಲಿ ಆಹಾರದ ಕೊರತೆ ಎಚ್ಚೆತ್ತವಾಗಿತ್ತು, ಉದ್ಯಮಗಳು ಸಹ ಸಾಕಷ್ಟು ಬೆಳೆದಿರಲ್ಲಿಲ್ಲ, ಪ್ರಸ್ತುತದಲ್ಲಿ ಆಧುನಿಕ ತಂತ್ರಜ್ಞಾನ ಸೇರಿದಂತೆ ಎಲ್ಲ ರಂಗಗಳಲ್ಲಿ ಮಾಡಿರುವ ಸಾಧನೆಗೆ ಅಂದು ಪ್ರಧಾನಿಯಾಗಿದ್ದ ನೆಹರೂ ಅವರ ದೂರದೃಷ್ಟಿಯ ಫಲವಾಗಿದೆ ಎಂದು ಸ್ಮರಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮದೇ ಆದ ಜವಾಬ್ದಾರಿಯಲ್ಲಿ ನಾಡಿನ ಜನರಿಗೆ ಹಲವಾರು ಅಭಿವೃದ್ಧಿಯ ಬದಲಾವಣೆ ಹಾಗೂ ದೂರದೃಷ್ಟಿಯಿಂದ ಯೋಜನೆಗಳ ಜೊತೆಯಲ್ಲಿ ರಾಷ್ಟ್ರವನ್ನು ಮುನ್ನಡೆಸುವ ಕೆಲಸ ಮಾಡುತ್ತಿವೆಂದು ಹೇಳಿದರು.

ತಹಶೀಲ್ದಾರ್ ಕೆ.ಎನ್.ಲೋಕೇಶ್ ಮಾತನಾಡಿ, ಭಾರತ ದೇಶಕ್ಕೆ ಆಗಸ್ಟ್ 15, 1947ರಲ್ಲಿ ಸ್ವತಂತ್ರ ಬಂದರೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರು ಬರೆದ ಸಂವಿಧಾನವನ್ನು ಚಿಂತನ ಮಂಥನ ನಡೆಸಿ, ಹಲವಾರು ಸಭೆಗಳನ್ನು ನಡೆಸಿ ಎಲ್ಲರ ಒಪ್ಪಿಗೆ ಪಡೆದು 1950 ಜ.26ರಂದು ಸಂವಿಧಾನವನ್ನು ಅಂಗೀಕರಿಸಿ ಭಾರತ ದೇಶವನ್ನು ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ಘೋಷಣೆ ಮಾಡಲಾಯಿತು ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಿ ಗೌರವಿಸಲಾಯಿತು. ಉತ್ತಮ ಪಥಸಂಚಾಲಯ ಮಾಡಿದ ಶಾಲೆಯ ವಿದ್ಯಾರ್ಥಿಗಳಿಗೆ ಶಾಸಕ ಪಿ.ಎಂ ನರೇಂದ್ರಸ್ವಾಮಿ ಪ್ರಶಸ್ತಿಯನ್ನು ನೀಡಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ತಾ.ಪಂ ಕಾರ್ಯನಿರ್ವಹಕ ಅಧಿಕಾರಿ ಮಮತ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರ ಪಾಟೀಲ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಸೆಸ್ಕ್ ಎಇಇ ಎಚ್.ಎಸ್.ಪ್ರೇಮ್ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿ ಪಿ.ವೀರಭದ್ರಪ್ಪ, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂಜಯ್, ಸದಸ್ಯರಾದ ಎಂ.ಎನ್.ಶಿವಸ್ವಾಮಿ, ಇಂದ್ರಮ್ಮ. ನೂರುಲ್ಲಾ, ಎಂ.ಆರ್.ರಾಜಶೇಖರ್, ಪ್ರಮೀಳಾ, ಆತೀಯಾ ಬೇಗಂ, ಸೇರಿದಂತೆ ಇತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!