ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನೀರು ಬಿಡುವಂತೆ ನೀಡಿರುವ ಆದೇಶವನ್ನು ಮರುಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ರಾಷ್ಟ್ರಪತಿಯವರಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
ಮಳವಳ್ಳಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಸುಪ್ರೀಂ ಕೋರ್ಟ್ ಆದೇಶದ ವಿರುದ್ದ ಘೋಷಣೆ ಕೂಗಿ, ಆದೇಶವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು ಮಾತನಾಡಿ, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವು ಕೇಂದ್ರ ಸರ್ಕಾರದ ಅಧೀನದಲ್ಲಿದ್ದು,ಕರ್ನಾಟಕದಲ್ಲಿ ಕುಡಿಯುವ ನೀರಿಗೂ ತೊಂದರೆ ಉಂಟಾಗುತ್ತಿರುವುದರಿಂದ ಕೂಡಲೇ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ತಮಿಳು ನಾಡಿಗೆ ನೀರು ಬಿಡುವಂತೆ ಅದೇಶ ಮಾಡಿರುವುದನ್ನು ವಾಪಸ್ ಪಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋರಿದರು.
ಕಾವೇರಿ ನೀರನ್ನು ವ್ಯವಸಾಯ ಮಾಡಲು ಕೇಳುತ್ತಿಲ್ಲ, ಇನ್ನೆರಡು ತಿಂಗಳು ಕಳೆದರೆ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತದೆ. ಕರ್ನಾಟಕ ರಾಜ್ಯದ ಪರಿಸ್ಥಿತಿಯನ್ನು ಅರಿತು ತಮಿಳುನಾಡಿಗೆ ನೀರು ಹರಿಸದಂತೆ ಕೇಂದ್ರ ಸರ್ಕಾರ ಸೂಚನೆ ನೀಡಬೇಕೆಂದು ಹೇಳಿದರು.
ಪ್ರತಿಭಟನೆಯಲ್ಲಿ ಪುಟ್ಟಸ್ವಾಮಿ, ಅಂಬರೀಶ್, ಶಾಂತರಾಜು, ದಿಲೀಪ್ ಕುಮಾರ್,ಶಿವಮಾದೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ದ್ಯಾಪೇಗೌಡ, ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ, ಪುಟ್ಟಸ್ವಾಮಿ, ಅಂಬರೀಶ್, ಶಾಂತರಾಜು, ಮಹೇಶ್, ಸಂತೋಷ್, ಬಸವರಾಜು, ಪ್ರಕಾಶ್, ಲಿಂಗರಾಜು,ಕಿರಣ್ ಶಂಕರ್, ಕರಿಯಪ್ಪ ಸೇರಿದಂತೆ ಇತರರಿದ್ದರು.




