Friday, September 20, 2024

ಪ್ರಾಯೋಗಿಕ ಆವೃತ್ತಿ

ವಡ್ಡರಹಳ್ಳಿ ಬಿಎಂಸಿ ಕೇಂದ್ರದ ಉದ್ಘಾಟನೆಗೆ ಆಗಮಿಸಲು ಮನವಿ

ಮಳವಳ್ಳಿ ತಾಲ್ಲೂಕಿನ ವಡ್ಡರಹಳ್ಳಿಯಲ್ಲಿ ನೂತನ ಬಿಎಂಸಿ ಕೇಂದ್ರದ ಉದ್ಘಾಟನಾ ಸಮಾರಂಭ ಆಗಸ್ಟ್ 14ರಂದು ಹಮ್ಮಿಕೊಳ್ಳಲಾಗಿದ್ದು, ಹಾಲು ಉತ್ಪಾದಕ ಸಹಕಾರ ಸಂಘದ ಆಡಳಿತ ಮಂಡಳಿ ಸದಸ್ಯರು ಹಾಗೂ ಹಾಲು ಉತ್ಪಾದಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕೆಂದು ಕೆಎಂಎಫ್ ನಿರ್ದೇಶಕ ವಿಶ್ವನಾಥ್ ಮನವಿ ಮಾಡಿದರು.

ಮಳವಳ್ಳಿ ತಾಲ್ಲೂಕಿನ ಕಾಗೇಪುರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಭೇಟಿ ಕೊಟ್ಟು ಕಾರ್ಯಕ್ರಮಕ್ಕೆ ಆಹ್ವಾನಿಸುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಬಾರಿ ಮನ್‌ಮುಲ್ ನಿರ್ದೇಶಕರಾಗಿ ಆಯ್ಕೆ ಮಾಡಿದ ನನ್ನೆಲ್ಲಾ ಹಾಲು ಉತ್ಪಾದಕರಿಗೆ ಕಾರ್ಯಕ್ರಮದ ಮೂಲಕ ಔತಣ ಕೂಟವನ್ನು ಹಮ್ಮಿಕೊಳ್ಳಲಾಗಿದ್ದು, ಸಂಘದ ಆಡಳಿತ ಮಂಡಳಿ ಹಾಗೂ ಹಾಲು ಉತ್ಪಾದಕ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿದರು.

ಕಾಗೇಪುರ ಹಾಲು ಉತ್ಪಾದಕ ಸಹಕಾರ ಸಂಘದ ನಿವೇಶನ ಖರೀದಿಸಲು ವೈಯಕ್ತಿಕವಾಗಿ ಒಂದು ಲಕ್ಷ ರೂ.ಗಳನ್ನು ನೀಡುತ್ತೇನೆ. ನಿವೇಶನ ಖರೀದಿಸಿ ಸಂಘದ ಹೆಸರಿನಲ್ಲಿ ಖಾತೆ ಮಾಡಿಸಿಕೊಂಡ ನಂತರ ಗುದ್ದಲಿ ಪೂಜೆ ಮಾಡವುದಾಗಿ ತಿಳಿಸಿದರು.

ಕಟ್ಟಡಕ್ಕೆ ಧರ್ಮಸ್ಥಳ ಸಂಘದಿಂದ 2ಲಕ್ಷ, ಮನ್‌ಮುಲ್‌ನಿಂದ 2ಲಕ್ಷ ಹಾಗೂ ಕೆ.ಎಂಎಫ್‌ನಿಂದ 4.50 ಲಕ್ಷ ಅನುದಾನ ಕೊಡಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ವೆಂಕಟೇಶ್, ರಮೇಶ್, ಮುಖಂಡರಾದ ಚಂದಹಳ್ಳಿ ಶ್ರೀಧರ್, ನಾರಾಯಣ್ ಸೇರಿದಂತೆ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!