Wednesday, May 22, 2024

ಪ್ರಾಯೋಗಿಕ ಆವೃತ್ತಿ

ಭತ್ತ ಇಲ್ಲವೇ ರಾಗಿ ತಳಿಗೆ ಡಾ. ಜಿ. ಮಾದೇಗೌಡರ ಹೆಸರಿಡಲು ಮನವಿ

ಭತ್ತ ಇಲ್ಲವೇ ರಾಗಿ ತಳಿಗೆ ಡಾ. ಜಿ. ಮಾದೇಗೌಡರ ಹೆಸರಿಡಿ ಎಂದು ಶಾಸಕರಾದ ದಿನೇಶ್‌ ಗೂಳಿಗೌಡ ಅವರು ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ  ಮನವಿ ಮಾಡಿದರು.

ಮಂಡ್ಯದ ಡಾ. ಜಿ. ಮಾದೇಗೌಡ ಪ್ರತಿಷ್ಠಾನವು ಹಮ್ಮಿಕೊಂಡಿದ್ದ 23ನೇ ವರ್ಷದ ರಾಜ್ಯ ಮಟ್ಟದ ಜಿ. ಮಾದೇಗೌಡ ಸಮಾಜಸೇವಾ ಮತ್ತು ಸಾವಯವ ಕೃಷಿ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಅವರು, ಜಿ. ಮಾದೇಗೌಡರು ಕಳೆದ 60 ವರ್ಷಗಳ ಕಾಲ ಶೈಕ್ಷಣಿಕವಾಗಿ, ರಾಜಕೀಯವಾಗಿ ಹತ್ತು ಹಲವು ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ. ಅವರ ಹೆಸರು ಮುಂದಿನ ಪೀಳಿಗೆಗೆ ಚಿರಸ್ಥಾಯಿಯಾಗಿ ಉಳಿಯಲು ಭತ್ತ ಅಥವಾ ರಾಗಿ ತಳಿಗೆ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಮಾಡಿದರು.

ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.‌ ಚಲುವರಾಯಸ್ವಾಮಿ ಅವರು ಈ ಬಗ್ಗೆ ಸಕಾರಾತ್ಮಕ ಸ್ಪಂದನೆ ನೀಡಿದ್ದು, ಹೆಸರನ್ನು ಇಡುವ ಬಗ್ಗೆ ಒಲವು ತೋರಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!