Friday, November 20, 2026

ಪ್ರಾಯೋಗಿಕ ಆವೃತ್ತಿ

ಕೇಂದ್ರ ಸರ್ಕಾರ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡುವ ನಿರ್ಣಯ ಮಂಡಿಸಬೇಕು : ಬಿ.ಎಸ್.ಶಿವಣ್ಣ

ಕೇಂದ್ರ ಸರ್ಕಾರ ಮಹಿಳೆಯರಿಗೆ ಕೂಡಲೇ ಲೋಕಸಭೆ ಹಾಗೂ ವಿಧಾನಸಭೆ ಗಳಲ್ಲಿ ಶೇ.50 ರಷ್ಟು ಮೀಸಲಾತಿ ಮಾಡುವ ನಿರ್ಣಯವನ್ನು ಮಂಡಿಸಬೇಕು ಎಂದು ಡಾ.ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಬಿ.ಎಸ್.ಶಿವಣ್ಣ ಒತ್ತಾಯಿಸಿದರು.

ಮಂಡ್ಯ ನಗರದ ಕನಕ ಸಮುದಾಯ ಭವನದಲ್ಲಿ ಜನಪರ ಸಾಹಿತ್ಯ ಪರಿಷತ್ತು (ರಿ), ಬೆಂಗಳೂರು, ಕರ್ನಾಟಕ ರಾಜ್ಯ ಅಹಲ್ಯಾಬಾಯಿ ಹೋಳ್ಳರ್ ಮಹಿಳಾ ಸಾಂಸ್ಕೃತಿಕ ಪರಿಷತ್ತು, ಮಂಡ್ಯ ಜಿಲ್ಲಾ ಕುರುಬರ ಸಂಘ ಇವರ ವತಿಯಿಂದ ನೆಡೆದ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜಯಂತೋತ್ಸವ ಮತ್ತು ಸಾಧಕಿಯರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಬಗ್ಗೆ ಸಾಮಾಜಿಕ ನ್ಯಾಯದ ಹರಿಕಾರರಾದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯವರು ಖಾಸಗಿ ನಿರ್ಣಯ ಮಂಡಿಸಿ ಮಹಿಳೆಯರಿಗೆ ಶೇಕಡ 50ರಷ್ಟು ರಾಜಕೀಯ ಮೀಸಲಾತಿ ಕೊಡಿಸುವ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಅಡಿಪಾಯ ಆಗಬೇಕು ಎಂದು ಹೇಳಿದರು.

ಉದ್ಯೋಗ ಮೀಸಲಾತಿಯಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಆಡಳಿತದಲ್ಲಿ ಸಮಾನ ಅವಕಾಶ ಕೊಡಬೇಕು. ರಾಷ್ಟ್ರದಲ್ಲಿ ವಿನೂತನ ಜಾತಿಗಣತಿಗೆ ಒತ್ತಾಯ ಮಾಡಿದಂತೆ ಮುಂದಿನ ಲೋಕಸಭಾ ಅಧಿವೇಶನದಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕೊಡಬೇಕು ಎಂಬ ಹಕ್ಕೊತ್ತಾಯ ಮಂಡಿಸಬೇಕು ಎಂದು ಹೇಳಿದರು.

ಸಂವಿಧಾನಬದ್ಧವಾದ ಹಕ್ಕುಗಳು ಸಿಗಲು ರಾಷ್ಟ್ರದಲ್ಲಿ ಹೊಸ ಮನ್ವಂತರ ಪ್ರಾರಂಭ ಮಾಡಬೇಕು. ಲೋಕಸಭೆ ಹಾಗೂ ವಿಧಾನಸಭೆ ಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗುವ ಅಂಗೀಕಾರ ಆಗಬೇಕು. ಸಂವಿಧಾನದ ಆಶಯಗಳನ್ನು ಜಾರಿಗೊಳಿಸದೆ ಜಯಂತಿಗಳ ಆಚರಣೆಗೆ ಅರ್ಥವಿಲ್ಲ ಎಂದರು.

ಕರ್ನಾಟಕ ರಾಜ್ಯ ಅಹಲ್ಯಾಬಾಯಿ ಹೋಳ್ಳರ್ ಮಹಿಳಾ ಸಾಂಸ್ಕೃತಿಕ ಪರಿಷತ್ತು ರಾಜ್ಯಾಧ್ಯಕ್ಷೆ ಕೆ.ಆರ್. ಪ್ರಭಾವತಿ ಮಾತನಾಡಿ, ಅಹಲ್ಯಾಬಾಯಿ ಅವರು ಸಣ್ಣ ವಯಸ್ಸಿನಲ್ಲಿ ವಿಧವೆ ಆದರೂ ಸತಿ ಸಹಗಮನ ಪದ್ಧತಿ ತೊರೆದು ರಾಜ್ಯಭಾರ ನಡೆಸಿದವರು.ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರು ಅವರ ಸ್ಟೈರ್ಯ,ಧೈರ್ಯವನ್ನು ಮೆಚ್ಚಬೇಕು ಎಂದು ಹೇಳಿದರು.

ಮಹಿಳಾ ಅಭಿವೃದ್ಧಿಗೆ ಹೋರಾಟ ಮಾಡಿ ಮಹಿಳಾ ಸಬಲೀಕರಣಕ್ಕೆ ಶ್ರಮಿಸಿದ್ದಾರೆ ಇವರ ಸಾಧನೆಗಳು ಪರಿಚಯ ಆಗಬೇಕು ಎಂದು ತಿಳಿಸಿದರು.

ಜಿಲ್ಲಾ ಹಿಂದುಳಿದ ವರ್ಗದ ಕಲ್ಯಾಣ ಅಧಿಕಾರಿ ಮಂಜುಳಾ ಮಾತನಾಡಿ ಹಾಲುಮತ ಸಮಾಜಕ್ಕೆ ಶ್ರೀಮಂತಿಕೆಯ ಗೌರವವಿದ್ದು ಉತ್ತಮವಾದ ಉನ್ನತ ಅಭಿಪ್ರಾಯವಿದೆ ಎಂದರು.

ಕುರುಬ ಸಮಾಜದವರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಮಕ್ಕಳಿಗೆ ಆಸ್ತಿಯನ್ನು ಮಾಡದೆ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ, ಆಸ್ತಿ ಮಾರಿದರೂ ಸರಿ ಮಕ್ಕಳಿಗೆ ಶಿಕ್ಷಣ ಕೊಡಿಸಿ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್. ಸುರೇಶ್ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯಾ ಧ್ಯಕ್ಷೆ ಸೌಮ್ಯರೆಡ್ಡಿ,ಕರ್ನಾಟಕ ರಾಜ್ಯ ಅಹಲ್ಯಾಬಾಯಿ ಹೋಳ್ಳರ್ ಮಹಿಳಾ ಸಾಂಸ್ಕೃತಿಕ ಪರಿಷತ್ತು ಮಂಡ್ಯ ಜಿಲ್ಲಾಧ್ಯಕ್ಷೆ ಸಾವಿತ್ರಮ್ಮ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟ ಪೂರ್ವ ಅಧ್ಯಕ್ಷ ಸುಬ್ಬಣ್ಣ,ಆರ್ ಟಿಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಉದ್ಯಮಿ ಪುಟ್ಟಸ್ವಾಮಿ ಕರಡಿಕೊಪ್ಪಲು,ಜನಪರ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮಹೇಶ್ ಚಿಕ್ಕಲ್ಲೂರು, ಮೈಸೂರು ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ, ಹೇಮಾವತಿ, ಶಶಿಧರ್ ಸೇರಿದಂತೆ ಮತ್ತಿತರರು ಹಾಜರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ